Bengaluru 24°C

ಪ್ರವಾಸಿಗರಿಗೆ ಸಿಹಿಸುದ್ದಿ: ಸರ್ವಋತು ಪ್ರವಾಸಿ ತಾಣವಾಗಿ ‘ಜೋಗ ಜಲಾಶಯ’ ಅಭಿವೃದ್ಧಿ

Jog

ಶಿವಮೊಗ್ಗ: ಪ್ರಸ್ತುತ ಶರಾವತಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಜೋಗ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ. ವಾರಾಂತ್ಯದ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು, ಜೋಗ ಜಲಪಾತದ ವೈಭವವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಇದರ ಮಧ್ಯೆ ಪ್ರವಾಸಿಗರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ.


ಸರ್ವ ಋತು ಪ್ರವಾಸಿ ತಾಣವಾಗಿ ಜೋಗ ಜಲಾಶಯವನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, 183 ಕೋಟಿ ರೂಪಾಯಿ ಮೊತ್ತದ ಯೋಜನೆ ಕಾಮಗಾರಿ ಚಾಲನೆಯಲ್ಲಿದೆ. ಈ ಪೈಕಿ 30 ಕೋಟಿ ರೂಪಾಯಿ ಅನುದಾನ ಈಗಾಗಲೇ ಬಿಡುಗಡೆಯಾಗಿದೆ.


ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸಿದ್ಧತೆ ನಡೆಸಲಾಗಿದ್ದು, ಪ್ರವಾಸಿಗರಿಗೆ ಮೂಲಭೂತ ಸೌಕರ್ಯಗಳ ಜೊತೆಗೆ ಮನರಂಜನೆ ನೀಡಲು ಹೈದರಾಬಾದಿನ ರಾಮೋಜಿ ಫಿಲಂ ಸಿಟಿಗೆ ಅಧ್ಯಯನ ಪ್ರವಾಸ ಕೈಗೊಳ್ಳಲಾಗುತ್ತದೆ ಎಂದು ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ.


Nk Channel Final 21 09 2023