ಶಿವಮೊಗ್ಗ: ಫಾರ್ಚೂನರ್ ಕಾರಿನಲ್ಲಿ ಬಂದು ಖದೀಮರು ಹಸುವನ್ನು ಕದ್ದು ಪರಾರಿಯಾಗಿರುವ ಘಟನೆ ಸೊರಬದಲ್ಲಿ ನಡೆದಿದೆ.
ಹಸು ಕಳವು ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. KA 01 MZ 5843 ಬೂದು ಬಣ್ಣದ ಟೊಯೀಟಾ FORTUNER ಕಾರು ಕಳ್ಳರು ಮಂಕಿ ಕ್ಯಾಪ್ ಹಾಕಿಕೊಂಡು ಬಂದು, ಆಕಳುವೊಂದನ್ನು ಕಳ್ಳತನ ಮಾಡಿದ್ದಾರೆ.
ಹಸು ಕದ್ದ ವಿಷಯ ತಿಳಿದ ಕೂಡಲೇ ಸ್ಥಳೀಯರು ಕಾರನ್ನು ಅಡ್ಡ ಹಾಕಲು ಯತ್ನಿಸಿದ್ದಾರೆ. ಆದರೆ, ಕಳ್ಳರು ಸ್ಥಳೀಯರ ಮೇಲೆ ಕಾರು ಹತ್ತಿಸುವ ಯತ್ನಿಸಿದ್ದಾರೆ. ಘಟನೆ ಕುರಿತು ಸ್ಥಳೀಯರು ಸೊರಬ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
Ad