ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ 2024ರ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಸತತ ನಾಲ್ಕು ಸುತ್ತುಗಳಲ್ಲಿಯೂ ಬಿ.ವೈ. ರಾಘವೇಂದ್ರ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ನಿಂದ ಕಣಕ್ಕಿಳಿದ್ದಿದ್ದ ಗೀತಾ ಶಿವರಾಜ್ ಕುಮಾರ್ ಸತತ ಹಿನ್ನೆಡೆ ಕಂಡಿದ್ದಾರೆ.

ಮೂರನೇ ಸುತ್ತಿನಲ್ಲೂ ಬಿಜೆಪಿಗೆ ಮುನ್ನಡೆ ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ 23,915 ಸಾವಿರ ಮತಗಳ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ತ್ರಿಕೋನ ಸ್ಪರ್ಧೆ ನಿರೀಕ್ಷಿಸಲಾಗಿತ್ತು. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ(414618 ಮತ) , ಕಾಂಗ್ರೆಸ್‌ನಿಂದ ಗೀತಾ ಶಿವರಾಜ್ ಕುಮಾರ್ (309146)  ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಕೆ. ಎಸ್. ಈಶ್ವರಪ್ಪ(17122)  ಸ್ಪರ್ಧೆಯಲ್ಲಿದ್ದರು. ಆದರೆ ಬಿಜೆಪಿ ಗೆಲುವಿನತ್ತ ಸಾಗುತ್ತಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್‌ಗೆ ಹಿನ್ನಡೆಯಾಗಿದೆ.