ಶಿವಮೊಗ್ಗ :  ದಿನ ದಿನಕ್ಕೂ ಅತ್ಯಾಚಾರ ಪ್ರಕರಣ ಹೆಚ್ಚುತ್ತಲೇ ಇದೆ. ಎಲ್ಲ ತಿಳಿದವರಿಂದಲೇ ಇಂತಹ ಕೃತ್ಯ ನಡೆಯುತ್ತಿದೆ. ಮಕ್ಕಳಿಗೆ ತಿಳಿಹೇಳಬೇಕಿದ್ದ ಶಿಕ್ಷಕಲೇ ಕಾಮುಕನಂತೆ ವರ್ತಿಸಿದ್ದಾನೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ಉಪನ್ಯಾಸಕನೊಬ್ಬ ಮದುವೆ ಆಗುವುದಾಗಿ  ನಂಬಿಸಿ ಅತ್ಯಾಚಾರವೆಸಗಿದ್ದಾನೆ. ಉಪನ್ಯಾಸಕನನ್ನು ಪೊಲೀಸರು ಬಂಧಿಸಿದ್ದಾರೆ. ಸಾಗರದ ಖಾಸಗಿ ಕಾಲೇಜಿನ ಉಪನ್ಯಾಸಕನಾಗಿರುವ ಪುನೀತ್ ಬಂಧಿತ ಆರೋಪಿಯಾಗಿದ್ದಾನೆ.

ಅರ್ಥವಾಗದ ವಿಷಯದ ಬಗ್ಗೆ ಅರ್ಥ ಮಾಡಿಸಿಕೊಡ್ತೇನೆ ಅಂತೇಳಿ ವಿದ್ಯಾರ್ಥಿನಿ ಜತೆ ಸ್ನೇಹ ಬೆಳೆಸಿದ್ದ. ಸ್ನೇಹ ನಂತರ ಮದುವೆಯಾಗುವುದಾಗಿ ನಂಬಿಸಿದ್ದ ಉಪನ್ಯಾಸಕ ತದನಂತರ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ಸದ್ಯ ಅತ್ಯಾಚಾರ ಕುರಿತು ಶಿವಮೊಗ್ಗ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿ ಉಪನ್ಯಾಸಕ ಪುನೀತ್ ವಶಕ್ಕೆ ಪಡೆದ ಪೊಲೀಸರು ವಿಚಾರಣೆಯನ್ನು ಮುಂದುವರಿಸಿದ್ದಾರೆ.