ಶಿವಮೊಗ್ಗ: ವಾಕಿಂಗ್ ಮಾಡುತ್ತಿದ್ದ MBBS ವಿದ್ಯಾರ್ಥಿ ಸ್ಥಳದಲ್ಲಿಯೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗದ ಸಿಮ್ಸ್ ಮೆಡಿಕಲ್ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿ ಪೃಥ್ವಿರಾಜ್ (20) ಮೃತಪಟ್ಟವರು. ಬುಧವಾರ ಸಂಜೆ ನಗರದ ಪ್ರವಾಸಿ ಮಂದಿರದ ಬಳಿ ವಾಕಿಂಗ್ ಮಾಡುವಾಗ ವಿದ್ಯಾರ್ಥಿ ಕುಸಿದು ಬಿದ್ದಿದ್ದರು.
ತಕ್ಷಣವೇ ಅವರನ್ನು ಮೋಹನ್ ಎಂಬುವರು ಪ್ರವಾಸಿ ಮಂದಿರ ಮುಂಭಾಗದಲ್ಲಿಯೇ ಇರುವ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಮಾರ್ಗಮಧ್ಯೆಯೇ ವಿದ್ಯಾರ್ಥಿ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯಲ್ಲಿ ವೈದ್ಯರು ದೃಢಪಡಿಸಿದ್ದಾರೆ. ಪೃಥ್ವಿರಾಜ್ ಅವರ ತಂದೆ ಮುತ್ತಣ್ಣ ಅವರು ನಗರದಲ್ಲಿ ಔಷಧ ಸಗಟು ವ್ಯಾಪಾರ ಮಾಡಿಕೊಂಡಿದ್ದಾರೆ.
Ad