ಶಿವಮೊಗ್ಗ: ನಗರದ ಹೊರವಲಯದಲ್ಲಿರುವ ತ್ಯಾವರೆಕೊಪ್ಪ ಹುಲಿ ಸಿಂಹಧಾಮದಲ್ಲಿ ಪ್ರವಾಸಿಗರ ಆಕರ್ಷಣೆಯ ಕೇಂದ್ರಬಿಂದುವಾಗಿದ್ದ ಗಂಡು ಸಿಂಹವೊಂದು ಅಸುನೀಗಿದೆ. ಹದಿನೆಂಟು ವರ್ಷದ ಗಂಡು ಸಿಂಹ ಆರ್ಯ ಇಂದು ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದೆ. ಕಳೆದ ಆರು ತಿಂಗಳುಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಆರ್ಯ ಕಳೆದ ಮೂರು ದಿನಗಳಿಂದ ಆಹಾರವನ್ನು ತ್ಯಜಿಸಿತ್ತು. ಇಂದು ಕೊನೆಯುಸಿರೆಳೆದಿದೆ.
2008ರಲ್ಲಿ ಮೈಸೂರು ಮೃಗಾಲಯದಿಂದ ಶಿವಮೊಗ್ಗಕ್ಕೆ ಬಂದಿದ್ದ ಆರ್ಯ ಸಿಂಹದ ಅಗಲಿಕೆಯಿಂದ ಈಗ ಹುಲಿ ಸಿಂಹಧಾಮದಲ್ಲಿ ಸಿಂಹಗಳ ಸಂಖ್ಯೆ ಐದರಿಂದ ನಾಲ್ಕಕ್ಕೆ ಇಳಿದಿದೆ.