ಶಿವಮೊಗ್ಗ: ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ಮಧ್ಯೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಬಳಿಯ ಅರಬಿಳಚಿ ಕ್ಯಾಂಪ್ನಲ್ಲಿ ನಡೆದಿದೆ.
ಗಣಪತಿ ವಿಸರ್ಜನೆ ವೇಳೆ ಡೊಳ್ಳು ಭಾರಿಸುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಎರಡು ಗುಂಪುಗಳ ಗಲಾಟೆ ವಿರುದ್ಧ ಎರಡು ಪ್ರಕರಣಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಮುಂಜಾಗ್ರತೆಗೆ ಅರಬಿಳಚಿ ಕ್ಯಾಂಪ್ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದ್ದು, ಎರಡು ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದೆ.
Ad