ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಮದ್ಯ ಮಾರಾಟಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಬ್ರೇಕ್ ಹಾಕಿದೆ. ಮತದಾನ, ಎಣಿಕೆ ದಿನದಂದು ಮಾತ್ರ ಮದ್ಯ ಮಾರಾಟ ನಿರ್ಬಂಧ ಹೇರಿ ಹೊರಡಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.
ವಿಚಾರಣೆ ನಡೆಸಿದ ವಿಭಾಗೀಯ ಪೀಠ, ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿದ್ದು, 48 ಗಂಟೆ ಮುನ್ನ ಮದ್ಯ ಮಾರಾಟ ನಿರ್ಬಂಧ ಮುಂದುವರಿಯಲಿದೆ ಎಂದು ಆದೇಶಿಸಿದೆ.
ರಾಜ್ಯದಲ್ಲಿ 2024ರ ವಿಭಾಸಭಾ ಚುನಾವಣೆ ಫೆಬ್ರವರಿ 16 ರಂದು ನಿಗದಿಯಾಗಿದೆ.
ಮತದಾನ ಮುಕ್ತಾಯದ 48 ಗಂಟೆ ಮುನ್ನ ಮದ್ಯ ಮಾರಾಟ ನಿರ್ಬಂಧಿಸಬಹುದು ಎಂದು ಸರ್ಕಾರದ ಹಕ್ಕು ಪ್ರತಿಪಾದಿಸಿ ಎಎಜಿ ಪ್ರತಿಮಾ ಹೊನ್ನಾಪುರ ವಾದ ಮಂಡಿಸಿದರು. ಆಹಾರ ಪೂರೈಕೆ ಹೊರತುಪಡಿಸಿ ಮದ್ಯ ಮಾರಾಟ ಮಾಡುವಂತಿಲ್ಲ. 48 ಗಂಟೆಗಳ ಮುನ್ನ ಮದ್ಯ ಮಾರಾಟ ನಿರ್ಬಂಧ ಪಾಲಿಸಬೇಕು ಎಂದು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ.ಎಸ್.ಆರ್.ಕೃಷ್ಣ ಕುಮಾರ್ ಅವರಿದ್ದ ವಿಭಾಗೀಯ ಪೀಠ ಆದೇಶ ಹೊರಡಿಸಿದೆ.