ತುಮಕೂರು: ಎರಡು ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಐದು ಜನ ಸಾವನ್ನಪ್ಪಿರುವ ಘಟನೆ ಮಧುಗಿರಿ ತಾಲ್ಲೂಕು ಕಾಟಗಾನಹಟ್ಟಿ ಬಳಿ ನಡೆದಿದೆ.
ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಓರ್ವ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವಾಗ ಪ್ರಾಣ ಬಿಟ್ಟಿದ್ದಾರೆ. ಮೃತದೇಹಗಳನ್ನು ಮಧುಗಿರಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಸಿಯಾಜ್ ಮಾರುತಿ ಕಾರು ತುಮಕೂರು ಕಡೆಯಿಂದ ಬರುತ್ತಿತ್ತು. ಟಾಟಾ ಟಿಯಾ ಮಧುಗಿರಿ ಕಡೆಯಿಂದ ತುಮಕೂರು ಕಡೆ ಹೋಗುತ್ತಿತ್ತು. ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಹಾಗೂ ಕಾಟಗಾನಹಟ್ಟಿ ಬಳಿ ಈ ದುರ್ಘಟನೆ ನಡೆದಿದೆ.
ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರಲ್ಲಿ ಮೂವರು ಪುರುಷರು ಹಾಗೂ ಇಬ್ಬರು ಮಹಿಳೆಯರಾಗಿದ್ದಾರೆ. ಐವರಲ್ಲಿ ಸಿಂಧೂ ಎಂಬ ಮಹಿಳೆಯ ಗುರುತು ಪತ್ತೆಯಾಗಿದೆ. ಮಹಿಳೆ ಗೀತಾ ಮತ್ತು ಮತ್ತೊಬ್ಬ ಬಾಲಕನ ಸ್ಥಿತಿ ಗಂಭೀರವಾಗಿದೆ. ಇನ್ನುಳಿದವರ ಪರಿಶೀಲನೆ ಕಾರ್ಯ ಮುಂದುವರಿದಿದೆ. ಅಪಘಾತದ ಸ್ಥಳಕ್ಕೆ ಮಧುಗಿರಿ ಪಿಎಸ್‌ಐ ವಿಜಯ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Ad