Bengaluru 19°C

ತುಮಕೂರು: ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಯುವಕ ಮೃತ್ಯು

ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ, ರೈಲಿನಡಿ ಸಿಲುಕಿ ಯುವಕ ಸಾವನ್ನಪ್ಪಿದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ರೈಲ್ವೆ ನಿಲ್ದಾಣದ ಫ್ಲಾಟ್ ಫಾರಂ 4 ರಲ್ಲಿ ಘಟನೆ ಸಂಭವಿಸಿದೆ.

ತುಮಕೂರು: ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ, ರೈಲಿನಡಿ ಸಿಲುಕಿ ಯುವಕ ಸಾವನ್ನಪ್ಪಿದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ರೈಲ್ವೆ ನಿಲ್ದಾಣದ ಫ್ಲಾಟ್ ಫಾರಂ 4 ರಲ್ಲಿ ಘಟನೆ ಸಂಭವಿಸಿದೆ.


ಬೆಂಗಳೂರಿನಿಂದ ತುಮಕೂರಿಗೆ ಪುಷ್ಪಕ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬರುತ್ತಿದ್ದ ಯುವಕ, ಆಯತಪ್ಪಿ ರೈಲಿನಡಿ ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು.


ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಅಮ್ಮಸಂದ್ರ ಗ್ರಾಮದ ಛಾಯಾಂಕ್ (24) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಯುವಕ. ಈತ ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕೆಲಸ‌ ಮಾಡ್ತಿದ್ದ ಛಾಯಾಂಕ್. ತುಮಕೂರು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Nk Channel Final 21 09 2023