Ad

ಕೆಎಸ್‌ಆರ್‌ಟಿಸಿ ಬಸ್‌ಗೆ ಸಿಲುಕಿ ಬೈಕ್ ಸವಾರ ಮೃತ್ಯು

ಕೆಎಸ್‌ಆರ್‌ಟಿಸಿ ಬಸ್‌ಗೆ ಸಿಲುಕಿ ಬೈಕ್ ಸವಾರನೊಬ್ಬ ದಾರುಣವಾಗಿ ಮೃತಪಟ್ಟಿರುವ ಘಟನೆ ತುಮಕೂರು ನಗರದ ಶಿವಕುಮಾರ್ ಸ್ವಾಮೀಜಿ ವೃತ್ತದಲ್ಲಿ ನಡೆದಿದೆ.

ತುಮಕೂರು: ಕೆಎಸ್‌ಆರ್‌ಟಿಸಿ ಬಸ್‌ಗೆ ಸಿಲುಕಿ ಬೈಕ್ ಸವಾರನೊಬ್ಬ ದಾರುಣವಾಗಿ ಮೃತಪಟ್ಟಿರುವ ಘಟನೆ ತುಮಕೂರು ನಗರದ ಶಿವಕುಮಾರ್ ಸ್ವಾಮೀಜಿ ವೃತ್ತದಲ್ಲಿ ನಡೆದಿದೆ.

ತುಮಕೂರು ನಗರದ ಚೇತನ ಬಡಾವಣೆ ನಿವಾಸಿ ಚಂದ್ರಶೇಖರ್ (49) ಮೃತ ದುರ್ದೈವಿ. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚಂದ್ರಶೇಖರ್‌ ಬೈಕ್‌ನಲ್ಲಿ ಬಟವಾಡಿ ಕಡೆಯಿಂದ ಮಹಾತ್ಮ ಗಾಂಧಿ ಸ್ಟೇಡಿಯಂ ಕಡೆಗೆ ಹೋಗುತ್ತಿದ್ದರು. ಬಲ ತಿರುವು ಪಡೆದು ಮುಂದೆ ಹೋಗಬೇಕು ಎನ್ನುವಾಗ ಕೆಎಸ್‌ಆರ್‌ಟಿಸಿ ಬಸ್‌ವೊಂದು ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಸಮೇತ ಕೆಳಗೆ ಬಿದ್ದ ಚಂದ್ರಶೇಖರ್‌ ಅವರ ಮೇಲೆ ಬಸ್‌ ಹರಿದಿದೆ. ಬಸ್‌ ನಡಿ ಸಿಲುಕಿ ಗಂಭೀರ ಗಾಯಗೊಂಡಿದ್ದ ಚಂದ್ರಶೇಖರ್‌ ಅವರನ್ನು ಸ್ಥಳೀಯರು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿಂದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ. ಪ್ರಕರಣ ತುಮಕೂರಿನ ಎನ್‌ಇಪಿಎಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Ad
Ad
Nk Channel Final 21 09 2023