Bengaluru 29°C
Ad

ಡಿ.ಕೆ ಸುರೇಶ್ ಸೋಲಿಗೆ ಸಿದ್ದರಾಮಯ್ಯ ಹಾಗೂ ಅವರ ಟೀಮ್ ಕಾರಣ: ಬಿಜೆಪಿ ಶಾಸಕ ಸುರೇಶ್ ಗೌಡ

ಲೋಕಸಭಾ ಚುನಾವಣೆಯಲ್ಲಿ ಡಿ.ಕೆ ಸುರೇಶ್ ಸೋಲಿಗೆ ಸಿದ್ದರಾಮಯ್ಯ ಹಾಗೂ ಅವರ ಟೀಮ್ ಕಾರಣ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ತುಮಕೂರು: ಲೋಕಸಭಾ ಚುನಾವಣೆಯಲ್ಲಿ ಡಿ.ಕೆ ಸುರೇಶ್ ಸೋಲಿಗೆ ಸಿದ್ದರಾಮಯ್ಯ ಹಾಗೂ ಅವರ ಟೀಮ್ ಕಾರಣ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜಕಾರಣದಲ್ಲಿ ಸಿದ್ದರಾಮಯ್ಯನವರೇ ಮುಂದುವರಿಯಬೇಕು ಎಂದು ಅಹಿಂದ ಟೀಮ್ ಯಾವಾಗಲೂ ಕೆಲಸ ಮಾಡುತ್ತಿದೆ. ಆ ಅಹಿಂದ ಟೀಮ್ ಮತ್ತು ಸಿದ್ದರಾಮಯ್ಯ ಸೇರಿ ಡಿಕೆ ಸುರೇಶ್ ಅವರನ್ನು ಸೋಲಿಸಿದ್ದಾರೆ.

ಡಿ.ಕೆ ಸುರೇಶ್ ಅವರ ಸೋಲು, ಸಂಚಿನ ಒಂದು ಭಾಗವಾಗಿದೆ. ಡಿ.ಕೆ ಶಿವಕುಮಾರ್ ಮುಂದೆ ಮುಖ್ಯಮಂತ್ರಿ ಆಗಬಾರದು. ಅವರ ನೈತಿಕತೆ ಕುಸಿಯಬೇಕು ಎಂದು ಹೀಗೆ ಮಾಡಿದ್ದಾರೆ.

ಡಿಕೆಶಿ ಮುಖ್ಯಮಂತ್ರಿ ಆಗಲ್ಲ, ಈ ಸರ್ಕಾರ ಉಳಿಯಲ್ಲ. ಇಲ್ಲಿಂದ ರಾಜಕೀಯ ಧ್ರುವೀಕರಣ ಪ್ರಾರಂಭವಾಗಿ, ಕಾಂಗ್ರೆಸ್‍ನಲ್ಲಿ ಒಳಜಗಳ ಶುರುವಾಗಲಿದೆ ಎಂದರು.

Ad
Ad
Nk Channel Final 21 09 2023
Ad