Bengaluru 22°C
Ad

ಕೆರೆಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಕೆರೆಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ‌ಮಧುಗಿರಿ ತಾಲೂಕಿನ ಸಿದ್ದಾಪುರದಲ್ಲಿ ನಡೆದಿದೆ.

ತುಮಕೂರು: ಕೆರೆಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ‌ಮಧುಗಿರಿ ತಾಲೂಕಿನ ಸಿದ್ದಾಪುರದಲ್ಲಿ ನಡೆದಿದೆ.

ಹಸೀನಾ(25), ಅಸೀಮಾ(8) ಹಾಗೂ ಆಲ್ಮಿಸಾ ಕೂಯಿಲ್(3) ಮೃತರು. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕ್ಷುಲ್ಲಕ ಕಾರಣಕ್ಕೆ ಜೀವ ತೆಗೆದುಕೊಳ್ಳುವ ನಿರ್ಧಾರಕ್ಕೆ ಬರುವವರ ಸಂಖ್ಯೆ ದಿನದಿಂದ ದಿನಕ್ಕೆ  ಹೆಚ್ಚುತ್ತಿದೆ. ಈ ಪ್ರಕರಣ ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಿಸಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

Ad
Ad
Nk Channel Final 21 09 2023