Ad

ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಆರ್. ಮಮತಾ ನಿಧನ

ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ  ಆಗಿದ್ದ ಎಂ.ಆರ್. ಮಮತಾ ಅನಾರೋಗ್ಯದಿಂದ ನಿಧನರಾಗಿದ್ದಾರೆ.  ತುಮಕೂರು ವಾರ್ತಾಧಿಕಾರಿಯಾಗಿದ್ದ ಎಂ.ಆರ್ ಮಮತಾ ಅವರು ಕೆಲ ದಿನಗಳಿಂದ   ಮೆದುಳು ರಕ್ತಸ್ರಾವದ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ಮಮತಾ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ  ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಕೊನೆಯುಸಿರೆಳೆದಿದ್ದಾರೆ.

ತುಮಕೂರು: ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ  ಆಗಿದ್ದ ಎಂ.ಆರ್. ಮಮತಾ ಅನಾರೋಗ್ಯದಿಂದ ನಿಧನರಾಗಿದ್ದಾರೆ.  ತುಮಕೂರು ವಾರ್ತಾಧಿಕಾರಿಯಾಗಿದ್ದ ಎಂ.ಆರ್ ಮಮತಾ ಅವರು ಕೆಲ ದಿನಗಳಿಂದ   ಮೆದುಳು ರಕ್ತಸ್ರಾವದ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ಮಮತಾ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ  ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಕೊನೆಯುಸಿರೆಳೆದಿದ್ದಾರೆ.

ಇವರು ಕಳೆದ 19 ವರ್ಷಗಳಿಂದ ವಾರ್ತಾ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ತುಮಕೂರಿನಲ್ಲಿ ಹಿರಿಯ ಸಹಾಯಕ ನಿರ್ದೇಶಕಿಯಾಗಿ 2 ವರ್ಷದಿಂದ ಕೆಲಸ ಮಾಡುತ್ತಿದ್ದರು. ಅಧಿಕಾರಿಯಾಗಿದ್ದಾಗ ಹಲವಾರು ಜನಪರ ಕೆಲಸಗಳನ್ನು ಇವರು ಮಾಡಿದ್ದರು. ಮೃತರು ಪತ್ರಕರ್ತ ಎಚ್‌.ಆರ್‌.ರವೀಶ್‌, ಪುತ್ರ ಪ್ರಜ್ವಲ್‌ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

 

Ad
Ad
Nk Channel Final 21 09 2023