ತುಮಕೂರು: ಜಿಲ್ಲೆಯಪೊಲೀಸ್ ಪೇದೆಯೊಬ್ಬರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು, ಸಿನೀಮಿಯ ಶೈಲಿಯಲ್ಲಿ ಕಳ್ಳನೊಬ್ಬನನ್ನು ಹಿಡಿದಿರುವ ಘಟನೆ ನಡೆದಿದ್ದು, ಕಳ್ಳನನ್ನು ಹಿಡಿಯುವ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೊಲೀಸ್ ಕಾನ್‌ಸ್ಟೇಬಲ್ ಕರ್ತವ್ಯ ನಿಷ್ಠೆಗೆ ಸಾರ್ವಜನಿಕ ವಲಯದಲ್ಲಿ ಬಾರಿ ಮೆಚ್ಚುಗೆ ವ್ಯಕ್ತವಾಗಿದೆ.
ಮಂಜೇಶ್@420 ಮಂಜ @ಹೊಟ್ಟೆ ಮಂಜ ಪೊಲೀಸ್ ಕೈಗೆ ಸಿಕ್ಕಿಬಿದ್ದ ಖತರ್ನಾಕ್ ಕಳ್ಳ. ಕೊರಟಗೆರೆ ಪೊಲೀಸ್ ಠಾಣೆಯ ಪೇದೆ ದೊಡ್ಡಲಿಂಗಯ್ಯ ಕಳ್ಳನನ್ನು ಹಿಡಿದವರು. ಸುಮಾರು 10ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ 420 ಮಂಜನನ್ನು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯ ಸಿಗ್ನಲ್ ಬಳಿ ಪೇದೆ ಸೆರೆ ಹಿಡಿದಿದ್ದಾರೆ.
Ad