ತುಮಕೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಪಡೆದುಕೊಂಡಿದ್ದ ಮೂವರು ಆರೋಪಿಗಳು ಬುಧವಾರ(ಅ2) ಜೈಲಿನಿಂದ ಬಿಡುಗಡೆಯಾಗಿದ್ದಾರೆ.ಜಾಮೀನು ಸಿಕ್ಕ 10 ದಿನಗಳ ನಂತರ ಆರೋಪಿ ನಂ.15 ಕಾರ್ತಿಕ್, ಆರೋಪಿ ನಂ.16 ಕೇಶವ ಮೂರ್ತಿ, ಆರೋಪಿ ನಂ.17 ನಿಖಿಲ್ ನಾಯಕ್ ಅವರನ್ನು ತುಮಕೂರು ಜಿಲ್ಲಾ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ.
ಕರ್ನಾಟಕ ಹೈಕೋರ್ಟ್ ಸೆ.23 ರಂದು ಕೇಶವಮೂರ್ತಿಗೆ ಜಾಮೀನು ನೀಡಿತ್ತು.ಕಾರ್ತಿಕ್ ಮತ್ತು ನಿಖಿಲ್ ನಾಯಕ್ ಗೆ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಜೈಲಿನಿಂದ ನಿರ್ದಿಷ್ಟ ಷರತ್ತುಗಳ ಅಡಿಯಲ್ಲಿ ಮೂವರನ್ನು ಬಿಡುಗಡೆ ಮಾಡಲಾಗಿದೆ. ಪ್ರಮುಖ ಆರೋಪಿಗಳಾದ ಪವಿತ್ರಾ ಗೌಡ, ನಟ ದರ್ಶನ್ ಸೇರಿ ಉಳಿದ ಪ್ರಮುಖ ಆರೋಪಿಗಳು ಅರ್ಜಿ ಸಲ್ಲಿಸಿದ್ದರೂ ಕೋರ್ಟ್ ಇನ್ನೂ ಜಾಮೀನು ನೀಡಿಲ್ಲ.
Ad