Bengaluru 21°C
Ad

ವಿಧಾನ ಪರಿಷತ್‌ಗೆ ಅಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ

ವಿಧಾನ ಪರಿಷತ್‌ಗೆ ಅಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ. ದಾವಣಗೆರೆ,ಚಿತ್ರದುರ್ಗ,ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ಒಳಗೊಂಡ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ ಶ್ರೀನಿವಾಸ್ ಖಚಿತವಾಗಿ ಗೆಲ್ಲುತ್ತಾರೆ ಎಂದು ಎಂದು ದೆಹಲಿ ವಿಶೇಷ ಪ್ರತಿನಿಧಿಟಿ.ಬಿ.ಜಯಚಂದ್ರ ಹೇಳಿದ್ದಾರೆ.

ದಾವಣಗೆರೆ,ಚಿತ್ರದುರ್ಗ,ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ಒಳಗೊಂಡ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ ಶ್ರೀನಿವಾಸ್ ಖಚಿತವಾಗಿ ಗೆಲ್ಲುತ್ತಾರೆ ಎಂದು ಎಂದು ದೆಹಲಿ ವಿಶೇಷ ಪ್ರತಿನಿಧಿಟಿ.ಬಿ.ಜಯಚಂದ್ರ ಹೇಳಿದ್ದಾರೆ.

Ad

ಆವರು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು, “ಅಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಿ.ಟಿ ಶ್ರೀನಿವಾಸ್ ಶಿಕ್ಷಕರ ಸಮಸ್ಯೆಯನ್ನು ಮೂಲದಿಂದ ಬಲ್ಲವರಾಗಿದ್ದಾರೆ. ಸಮಸ್ಯೆಯ ಮೂಲ ಮತ್ತು ಪರಿಹಾರ ಎರಡು ಅವರಿಗೆ ತಿಳಿದಿದೆ. ಇಂತಹವರು ವಿಧಾನಪರಿಷತ್‌ಗೆ ಆಯ್ಕೆಯಾಗಿ ಬಂದರೆ, ಶಿಕ್ಷಣ ಕ್ಷೇತ್ರದ ಜಲ್ವಂತ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗುತ್ತದೆ” ಎಂದರು.

Ad

ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿಲ್ಲ. ಹಾಗಾಗಿ ಶಿಕ್ಷಣದ ಗುಣಮಟ್ಟ ಕುಸಿದಿದೆ. ಶಿಕ್ಷಣವನ್ನು ಅದೋಗತಿಗೆ ತಂದು ಕೂರಿಸಿದ್ದಾರೆ.ಆದರೆ ನಮ್ಮ ಸರಕಾರ ಕಟ್ಟಡಗಳಿಗಿಂತ, ಬೌಧ್ಧಿಕವಾಗಿ ಮಕ್ಕಳು ಬೆಳೆಯಬೇಕು ಎಂಬ ಆಶಯದೊಂದಿಗೆ ಖಾಲಿ ಶಿಕ್ಷಕರ ಹುದ್ದೆಗಳನ್ನು ತುಂಬಲು ಮುಂದಾಗಿದೆ.ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಲಿದೆ.

Ad

ಎಂದು ಶಿಕ್ಷಣ ವ್ಯವಸ್ಥೆಯ ಬಗ್ಗೆ ವಿವರಿಸಿದ ಅವರು ಶಿಕ್ಷಣ ಕ್ಷೇತ್ರದಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಬೆಂಬಲಿಸುವಂತೆ ತಿಳಿಸಿದರು.

Ad

ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಮಾತನಾಡಿ, “ಕಳೆದ ಬಾರಿಯ ಆಗ್ನೇಯ ಪದವಿಧರ ರ ಕ್ಷೇತ್ರದ ಚುನಾವಣೆಯಲ್ಲಿ ಕೂದಲೆಳೆಯ ಅಂತರದಲ್ಲಿ ಸೋಲು ಅನುಭವಿಸಿದ್ದು,ಈ ಬಾರಿ ಮತದಾರರು ಹೆಚ್ಚಿನ ರೀತಿಯ ಒಲವು ತೋರಲಿದ್ದಾರೆ ಎಂಬ ವಿಶ್ವಾಸವಿದೆ.ಸ್ವತಃ ಶಿಕ್ಷಕನಾಗಿ, ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯಾಗಿ, ಕೆ.ಎ.ಎಸ್.ಅಧಿಕಾರಿಯಾಗಿ ನನ್ನ ಅನುಭವವನ್ನು ಆಗ್ನೇಯ ಶಿಕ್ಷಕರ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಮಾತನಾಡಿ,ನಾನು ಕೂಡ ಸುಮಾರು 4500 ಸಾವಿರ ವಿದ್ಯಾರ್ಥಿಗಳನ್ನು ಒಳಗೊಂಡ ಶಿಕ್ಷಣ ಸಂಸ್ಥೆಯನ್ನು ನಡೆಸುತಿದ್ದು,ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳ ಸಮಸ್ಯೆಯ ಅರಿವಿದೆ.ಬೆಂಗಳೂರು ಮಹಾನಗರದಲ್ಲಿರುವ ಖಾಸಗಿ ಶಾಲೆಗಳಿಗೆ ಅನುಸರಿಸುವ ಮಾನದಂಡಗಳನ್ನೇ ತಾಲೂಕಿನ ಯಾವುದೋ ಹಳ್ಳಿಯಲ್ಲಿರುವ ಶಿಕ್ಷಣ ಸಂಸ್ಥೆಗೆ ಅನ್ವಯಿಸುವುದು ಸರಿಯಲ್ಲ.

Ad

.ನಿಮ್ಮಗಳಲ್ಲಿ ಒಬ್ಬನಾಗಿ ನಿಮ್ಮ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ.ಜೂನ್ 03 ರಂದು ನಡೆಯುವ ಚುನಾವಣೆಯಲ್ಲಿ ನನಗೆ ಮತ ನೀಡಿ, ನಿಮ್ಮಗಳ ಸೇವೆಗೆ ಸದಾವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಪಿ.ಅರ್ .ಮಂಜುನಾಥ್ ಸೇರಿದಂತೆ ಅನೇಕ ಹಾಜರಿದ್ದರು.

Ad
Ad
Ad
Nk Channel Final 21 09 2023