Bengaluru 24°C
Ad

ತುಮಕೂರಿನಲ್ಲಿ ಭೀಕರ ಅಪಘಾತ: ನಾಲ್ವರ ಸ್ಥಿತಿ ಗಂಭೀರ

ಖಾಸಗಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಇರಕಸಂದ್ರ ಕಾಲೋನಿ ಬಳಿಯಿರುವ ವಡ್ಡರಹಳ್ಳಿಯಲ್ಲಿ ನಡೆದಿದೆ.

ತುಮಕೂರು: ಖಾಸಗಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಇರಕಸಂದ್ರ ಕಾಲೋನಿ ಬಳಿಯಿರುವ ವಡ್ಡರಹಳ್ಳಿಯಲ್ಲಿ ನಡೆದಿದೆ.

ಖಾಸಗಿ ಬಸ್ ಇರಕಸಂದ್ರ ಕಾಲೋನಿಯಿಂದ ಕೋಳಾಲ ಕಡೆಗೆ ತೆರಳುತ್ತಿದ್ದ ಸಂದರ್ಭ ಬೆಂಗಳೂರು ಕಡೆಯಿಂದ ಅಕ್ಕಿರಾಂಪುರಕ್ಕೆ ತೆರಳುತ್ತಿದ್ದ ಕಾರು ಬಸ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಕೋಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ad
Ad
Nk Channel Final 21 09 2023