Ad

ಲಾರಿ ಚಾಲಕ ಪಾದಚಾರಿಗೆ, ಕಾರಿಗೆ ಡಿಕ್ಕಿ ಹೊಡೆದು ಪರಾರಿ: ಓರ್ವ ಮೃತ್ಯು

ಕಂಟೈನರ್ ಲಾರಿಯೊಂದು ಪಾದಚಾರಿಗಳು ಹಾಗೂ ಕಾರಿಗೆ ಡಿಕ್ಕಿ ಹೊಡೆದಿರುವ ಭೀಕರ ಘಟನೆ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ತುಮಕೂರು: ಕಂಟೈನರ್ ಲಾರಿಯೊಂದು ಪಾದಚಾರಿಗಳು ಹಾಗೂ ಕಾರಿಗೆ ಡಿಕ್ಕಿ ಹೊಡೆದಿರುವ ಭೀಕರ ಘಟನೆ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

Ad
300x250 2

ಕಂಟೈನರ್‌ ಲಾರಿಯೊಂದು ಮಧುಗಿರಿ ಕಡೆಯಿಂದ ಪಾವಗಡಕ್ಕೆ ತೆರಳುತ್ತಿತ್ತು. ಲಾರಿ ಚಾಲಕನ ಅಜಾಗರೂಕತೆಯಿಂದ ಈ ಭೀಕರ ಅಪಘಾತ ಸಂಭವಿಸಿದೆ. ಮಿಡಿಗೇಶಿ ಬಳಿಯ ಹೆದ್ದಾರಿಯಲ್ಲಿ ಪಾದಚಾರಿಗಳಿಬ್ಬರಿಗೆ ಕಂಟೈನರ್ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ನಿಂಗಪ್ಪ (50) ಮೃತ ದುರ್ದೈವಿ.

ಲಾರಿ ಚಾಲಕ ಪಾದಚಾರಿಗೆ ಡಿಕ್ಕಿ ಹೊಡೆದು ಬಳಿಕ ಇಂಡಿಕಾ ಕಾರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾನೆ. ನಿಂಗಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಗಾಯಾಳು ಸಿದ್ದಪ್ಪಗೆ ಮಧುಗಿರಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad
Ad
Nk Channel Final 21 09 2023
Ad