Bengaluru 22°C
Ad

10 ಕೋಟಿ ರೂ. ಅನುದಾನದಲ್ಲಿ ಹಿರಿಯಡಕ – ಗುಡ್ಡೆಯಂಗಡಿ – ಕಾರ್ಕಳ ರಸ್ತೆ ಅಭಿವೃದ್ಧಿ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಬಹು ದಿನಗಳ ಬೇಡಿಕೆಯ ಹಿರಿಯಡಕ - ಗುಡ್ಡೆಯಂಗಡಿ - ಕಾರ್ಕಳ ರಸ್ತೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಲೋಕೋಪಯೋಗಿ ಇಲಾಖೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಅಡಿಯಲ್ಲಿ 10 ಕೋಟಿ ಅನುದಾನ ಮಂಜೂರಾಗಿದೆ.

ಉಡುಪಿ: ಬಹು ದಿನಗಳ ಬೇಡಿಕೆಯ ಹಿರಿಯಡಕ – ಗುಡ್ಡೆಯಂಗಡಿ – ಕಾರ್ಕಳ ರಸ್ತೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಲೋಕೋಪಯೋಗಿ ಇಲಾಖೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಅಡಿಯಲ್ಲಿ 10 ಕೋಟಿ ಅನುದಾನ ಮಂಜೂರಾಗಿದೆ.

Ad

ಇದರ ಗುದ್ದಲಿ ಪೂಜೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ನೆರವೇರಿಸಿದರು. ಈ ಸಂದರ್ಭದಲ್ಲಿ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಪೆರ್ಡೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಜಿಯಾನಂದ ಹೆಗಡೆ,

Ad

ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಉಸ್ತುವಾರಿಗಳಾದ ಉದಯ್, ಉಡುಪಿ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಗುತ್ತಿಗೆದಾರರಾದ ಕಿಶೋರ್ ಕುಮಾರ್ ಹಾಗೂ ಬೊಮ್ಮರಬೆಟ್ಟು, ಬೈರಂಪಳ್ಳಿ, ಪೆರ್ಡೂರು, ಕೊಡಿಬೆಟ್ಟು ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.

Ad
Ad
Ad
Nk Channel Final 21 09 2023