ಉಡುಪಿ : ಜಿಲ್ಲೆಯ ಬೈಂದೂರು ತಾಲ್ಲೂಕು ನಾಗೂರುನಲ್ಲಿರುವ ಮಹಾಲಸಾ ಕಲ್ಚರಲ್ ಹಾಲ್ ಸಭಾಂಗಣದಲ್ಲಿ ಬಿಜೆಪಿ ಬೈಂದೂರು ಮಂಡಲ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಇಂದು ಆಯೋಜಿಸಿದ್ದ “ಬ್ರಹ್ಮಶ್ರೀ ನಾರಾಯಣ ಗುರು” ಗಳ 170ನೇ ವರ್ಷದ ಜಯಂತಿ ಸಮಾರಂಭ ಅದ್ದೂರಿಯಿಂದ ಜರಗಿತು.
ಈ ಸಮಯದಲ್ಲಿ ಶಿವಮೊಗ್ಗ ಲೋಕಸಭಾ ಸದಸ್ಯರಾದ ಬಿ ವೈ ರಾಘವೇಂದ್ರ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯರಾದ ಶ್ರೀ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ಶ್ರೀ ಗುರುರಾಜ್ ಗಂಟಿಹೊಳೆ, ಬಿಜೆಪಿ ಜಿಲ್ಲಾಧ್ಯಕ್ಷರಾದ ಕಿಶೋರ್ ಕುಮಾರ್, ಬಿಜೆಪಿ ಒಬಿಸಿ ಮೋರ್ಚದ ರಾಜ್ಯ ಉಪಾಧ್ಯಕ್ಷರಾದ ವಿಠಲ ಪೂಜಾರಿ,ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್ ಸಿ ನಾರಾಯಣ್ ರೆಂಜ, ಬೈಂದೂರು ಬಿಜೆಪಿ ಅಧ್ಯಕ್ಷರಾದ ದೀಪಕ್ ಶೆಟ್ಟಿ ಉಡುಪಿ ಓಬಿಸಿ ಮೋರ್ಚ ಜಿಲ್ಲಾಧ್ಯಕ್ಷರಾದ ವಿಜಯಕುಮಾರ್, ಬೈಂದೂರು ಒಬಿಸಿ ಮೋರ್ಚಾದ ಅಧ್ಯಕ್ಷರು ಸೇರಿದಂತೆ ಪಕ್ಷದ ಅನೇಕ ಹಿರಿಯರು ಮತ್ತು ಮುಖಂಡರು ಉಪಸ್ಥಿತರಿದ್ದರು.
Ad