ಉಡುಪಿ: ಬೈಕ್ ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಾಪು ತಾಲೂಕಿನ ಕೊಪ್ಪಲಂಗಡಿಯಲ್ಲಿ ಇಂದು ಸಂಜೆ ನಡೆದಿದೆ.

ಮೃತಪಟ್ಟ ಬೈಕ್‌ ಸವಾರ ತಮಿಳುನಾಡು ಮೂಲದ ಯುವಕನೆಂದು ಗುರುತಿಸಲಾಗಿದೆ‌. ಈ ಘಟನೆಯಲ್ಲಿ ಕಾರು ಚಾಲಕನಿಗೂ ಗಂಭೀರ ಗಾಯಗಳಾಗಿವೆ. ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಬೈಕ್, ಅದೇ ದಿಕ್ಕಿನಲ್ಲಿ ಬರುತ್ತಿದ್ದ ಕಾರಗೆ ಡಿಕ್ಕಿಯಾಗಿದೆ.

ಬ (2)

ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳದಲ್ಲಿದ್ದ ವಿದ್ಯುತ್‌ ಕಂಬಗಳು ಮುರಿದು ಬಿದ್ದಿದೆ. ಸ್ಥಳಕ್ಕೆ ಕಾಪು ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.