ಉಡುಪಿ: ಕಟಪಾಡಿ ಅಂಡರ್‌ಪಾಸ್‌ ಪ್ರದೇಶದಲ್ಲಿ ಮೀನಿನ ಲಾರಿಯೊಂದು ಪಲ್ಟಿಯಾದ ಘಟನೆ ಶನಿವಾರ ನಡೆದಿದೆ.

ಉಡುಪಿಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಮೀನಿನ ಲಾರಿ ಕಟಪಾಡಿ ಅಂಡರ್‌ಪಾಸ್‌ ಕಾಮಗಾರಿ ಪ್ರದೇಶಕ್ಕೆ ನುಗ್ಗಿ ಪಲ್ಟಿಯಾಗಿದೆ. ಕಾಮಗಾರಿ ಹಿನ್ನೆಲೆಯಲ್ಲಿ ವಾಹನಗಳ ಸಂಚಾರಕ್ಕೆ ಪರ್ಯಾಯ ರಸ್ತೆ ವ್ಯವಸ್ಥೆ ಮಾಡಲಾಗಿತ್ತು. ಆದರೆ ಲಾರಿ ಚಾಲಕ ಪರ್ಯಾಯ ರಸ್ತೆಗೆ ತೆರಳದೆ ನೇರವಾಗಿ ಕಾಮಗಾರಿ ಪ್ರದೇಶಕ್ಕೆ ಪ್ರವೇಶಿಸಿದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಕಾಮಗಾರಿ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಸೂಚನಾ ಫಲಕವನ್ನು ಗಮನಿಸದೆ ಲಾರಿ ಮುಂದುವರಿದ ಪರಿಣಾಮ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.
ಅಪಘಾತದಿಂದ ಲಾರಿಗೆ ಹಾನಿಯಾಗಿದ್ದು, ಘಟನೆಯಿಂದ ಕೆಲಕಾಲ ವಾಹನ ಸಂಚಾರಕ್ಕೂ ಅಡಚಣೆ ಉಂಟಾಯಿತು.

View this post on Instagram

A post shared by News Karnataka (@newskarnataka)