ಉಡುಪಿ: ಗಾಂಜಾ ದಾಸ್ತಾನು ಇಟ್ಟುಕೊಂಡಿದ್ದ ಮನೆಯೊಂದಕ್ಕೆ ದಾಳಿ ನಡೆಸಿದ ಪೊಲೀಸರು ಮಹಿಳೆ ಸಹಿತ ಇಬ್ಬರನ್ನು ಬಂಧಿಸಿದ ಘಟನೆ ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ಉದಯ ನಗರ ಎಂಬಲ್ಲಿ ನಡೆದಿದೆ.
Ad
ಗುಲ್ವಾಡಿ ಗ್ರಾಮದ ಉದಯನಗರ ನಿವಾಸಿಗಳಾದ ನಜರುಲ್ಲಾ ಖಾನ್ (40) ಹಾಗೂ ಫಾತಿಮಾ(33) ಬಂಧಿತ ಆರೋಪಿಗಳು. ಈ ಇಬ್ಬರು ಆರೋಪಿಗಳು ಗಾಂಜಾ ಮಾರಾಟ ಮಾಡುವ ಉದ್ದೇಶದಿಂದ ಮನೆಯಲ್ಲಿ ಗಾಂಜಾ ದಾಸ್ತಾನು ಇಟ್ಟುಕೊಂಡಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿ 6.43 ಲಕ್ಷ ಮೌಲ್ಯದ 8 ಕೆ.ಜಿ 374 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
Ad
ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂದಾಪುರ ಗ್ರಾಮಾಂತರ ಪೊಲೀಸ್ ಉಪನಿರೀಕ್ಷಕ ಭೀಮಾಶಂಕರ ಸಿನ್ನೂರ ಸಂಗಣ್ಣ ನೇತೃತ್ವದಲ್ಲಿ ನೂತನ್ ಡಿ. ಪಿ.ಎಸ್.ಐ ಹಾಗೂ ಸಿಬ್ಬಂದಿಗಳಾದ ಸೂರ ನಾಯ್ಕ್, ರಾಜು.ಬಿ, ವಿಕ್ರಮ್, ಮಂಜುನಾಥ, ರಮೇಶ್, ಕಿಶನ್ ಗೌಡ, ಶೋಭಾ ಹಾಗೂ ನಯನ, ರಾಮ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Ad
Ad