Bengaluru 21°C
Ad

ಮೇ 27ರಂದು ಉಡುಪಿಯಲ್ಲಿ ವಿಧಾನಪರಿಷತ್ ಚುನಾವಣೆಯ ಘಟನಾಯಕರ ಸಮಾವೇಶ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭಾಗಿ

ಜೂನ್ 3ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಘಟ ನಾಯಕರ ಜಿಲ್ಲಾ ಮಟ್ಟದ ಸಮಾವೇಶವು ಮೇ 27ರ ಸೋಮವಾರ ಮಧ್ಯಾಹ್ನ 2 ಗಂಟೆಗೆ ಉಡುಪಿಯ ಹೋಟೆಲ್ ಕಿದಿಯೂರು ಇದರ ಮಾಧವ ಕೃಷ್ಣ ಸಭಾಂಗಣದಲ್ಲಿ ನಡೆಯಲಿದೆ.

ಉಡುಪಿ: ಜೂನ್ 3ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಘಟ ನಾಯಕರ ಜಿಲ್ಲಾ ಮಟ್ಟದ ಸಮಾವೇಶವು ಮೇ 27ರ ಸೋಮವಾರ ಮಧ್ಯಾಹ್ನ 2 ಗಂಟೆಗೆ ಉಡುಪಿಯ ಹೋಟೆಲ್ ಕಿದಿಯೂರು ಇದರ ಮಾಧವ ಕೃಷ್ಣ ಸಭಾಂಗಣದಲ್ಲಿ ನಡೆಯಲಿದೆ.

ಈ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭಾಗವಹಿಸಿ ಸೂಕ್ತ ಮಾರ್ಗದರ್ಶನ ನೀಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.

ಈ ಸಮಾವೇಶದಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಸಹಿತ ಪಕ್ಷದ ಶಾಸಕರು ಮತ್ತು ಮುಖಂಡರು ಭಾಗವಹಿಸಲಿದ್ದಾರೆ.

ಉಡುಪಿ ಜಿಲ್ಲೆಯಾದ್ಯಂತ ಮಂಡಲವಾರು ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಪ್ರತಿ 25 ಮತದಾರರ ಜವಾಬ್ದಾರಿಯನ್ನು ಹೊಂದಿರುವ ಘಟ ನಾಯಕರು ಹಾಗೂ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಮಂಡಲ, ಪ್ರಕೋಷ್ಠಗಳ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಪಕ್ಷದ ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ad
Ad
Nk Channel Final 21 09 2023
Ad