ಉಡುಪಿ: ಕರಾವಳಿಯಾದ್ಯಂತ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡುವಾಗ ತಜ್ಞ ಭೂವಿಜ್ಞಾನಿಗಳಿಂದ ಅಧ್ಯಯನ ನಡೆಸಿದ ಬಳಿಕವೇ ರಸ್ತೆ ನಿರ್ಮಾಣ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಹಿರಿಯ ಭೂವಿಜ್ಞಾನಿ ಡಾ. ಉದಯಶಂಕರ್ ಹೇಳಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು ರಸ್ತೆ ನಿರ್ಮಾಣ ಮಾಡುವಾಗ ಮತ್ತು ಪಶ್ಚಿಮಘಟ್ಟದ ತಪ್ಪಲಿನಲ್ಲಿ ಯೋಜನೆಗಳನ್ನು ಅನುಷ್ಠಾನ ಮಾಡುವಾಗ ಅಧ್ಯಯನ ಅಗತ್ಯ. ಎತ್ತರದ ಭೂಮಿಯನ್ನು ರಸ್ತೆಗಾಗಿ ಕೊರೆಯುವಾಗ ನುರಿತ ಭೂ ವಿಜ್ಞಾನಿಗಳ ಸಲಹೆ ಪಡೆಯಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಭೂಕುಸಿತ ಪ್ರಕರಣಗಳು ಜಾಸ್ತಿಯಾಗಲಿವೆ ಎಂದು ಅವರು ಎಚ್ಚರಿಸಿದ್ದಾರೆ.
Ad