ಉಡುಪಿ: ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದ್ರಾಳಿ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಬುಧವಾರ ನಡೆದಿದೆ.
ಮೃತ ಸವಾರನನ್ನು ಮಣಿಪಾಲದ ಉದ್ಯೋಗಿ ದೀಪೇಶ್ ದೇವಾಡಿಗ ಎಂದು ಗುರುತಿಸಲಾಗಿದೆ. ಇಂದ್ರಾಳಿ ದೇವಸ್ಥಾನದಿಂದ ಕೆಳಗೆ ಬರುತ್ತಿದ್ದ ಕಾರಿನ ಬ್ರೇಕ್ ಫೇಲ್ ಆಗಿದ್ದು, ಎರಡೂ ಬದಿಯಲ್ಲಿದ್ದ ವಾಹನಗಳು ಸಹಿತ ಜನರಿಗೆ ಕಾರು ಢಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ದೀಪೇಶ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕೆಲವು ಮಂದಿ ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ad