ಉಡುಪಿ: ಉಡುಪಿಯ ಶ್ರೀಕೃಷ್ಣಮಠದಲ್ಲಿ ಸಂಜೆ ನಡೆಯುವ ಅಷ್ಟಾವಧಾನ ಸೇವೆ ಅತ್ಯಂತ ಅಪೂರ್ವವಾಗಿದೆ. ಈ ಸೇವೆಯ ವೇಳೆಯಲ್ಲಿ ವಿವಿಧ ರೀತಿಯ ಧಾರ್ಮಿಕ ಪಠಣಗಳು ನಡೆಯುತ್ತದೆ.
ಅಷ್ಟಾವಧಾನ ಕಾರ್ಯಕ್ರಮದ ವೇಳೆ ಸ್ವಾಮೀಜಿಗಳ ಸಮ್ಮುಖದಲ್ಲಿ, ನಟ ನಿರೂಪಕ ಮಾಸ್ಟರ್ ಆನಂದ್ ಯಜುರ್ವೇದ ಪಠಣದ ಮೂಲಕ ಗಮನ ಸೆಳೆದಿದ್ದಾರೆ.
ಕೃಷ್ಣ ಮಠದ ಚಂದ್ರ ಶಾಲೆಯಲ್ಲಿ ನಡೆದ ಈ ಅಪೂರ್ವ ಕಾರ್ಯಕ್ರಮದ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗುತ್ತಿದೆ. ಬಹಳ ಸ್ಪಷ್ಟವಾಗಿ ಮತ್ತು ಕ್ರಮಬದ್ಧವಾಗಿ ಆನಂದ್ ಶ್ಲೋಕಗಳನ್ನು ಪಠಿಸುತ್ತಿರುವುದು ಗಮನ ಸೆಳೆದಿದೆ.

