Ad

ಜೂನ್ 16ರಂದು ರಂಗಭೂಮಿ ಆನಂದೋತ್ಸವ ಕಾರ್ಯಕ್ರಮ, ಪ್ರಶಸ್ತಿ ಪ್ರದಾನ

ರಂಗಭೂಮಿ ಉಡುಪಿ ಸಂಸ್ಥೆಯ ಆಶ್ರಯದಲ್ಲಿ ದಿ. ಕುತ್ಪಾಡಿ ಆನಂದ ಗಾಣಿಗರ ಸಂಸ್ಮರಣಾರ್ಥ ನಡೆಯುವ ರಂಗಭೂಮಿ ಆನಂದೋತ್ಸವ 2024 ಕಾರ್ಯಕ್ರಮವು ಉಡುಪಿ

ಉಡುಪಿ: ರಂಗಭೂಮಿ ಉಡುಪಿ ಸಂಸ್ಥೆಯ ಆಶ್ರಯದಲ್ಲಿ ದಿ. ಕುತ್ಪಾಡಿ ಆನಂದ ಗಾಣಿಗರ ಸಂಸ್ಮರಣಾರ್ಥ ನಡೆಯುವ ರಂಗಭೂಮಿ ಆನಂದೋತ್ಸವ 2024 ಕಾರ್ಯಕ್ರಮವು ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಇದೇ ಜೂನ್ 16 ರಂದು ಸಂಜೆ 5.45 ಕ್ಕೆ ನಡೆಯಲಿದೆ ಎಂದು ರಂಗಭೂಮಿ‌ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಚಂದ್ರ ಕುತ್ಪಾಡಿ ತಿಳಿಸಿದ್ದಾರೆ.

Ad
300x250 2

ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮದಲ್ಲಿ‌ ಗೀತಾನಂದ ಪ್ರತಿಷ್ಟಾನದ ಪ್ರವರ್ತಕ ಆನಂದ ಸಿ.ಕುಂದರ್ ಅವರಿಗೆ ತಲ್ಲೂರು ಗಿರಿಜಾ ಶಿವರಾಮ ಶೆಟ್ಟಿ ಸಂಸ್ಕೃತಿ ಸಾಧಕ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ನ ಪ್ರವರ್ತಕ ಡಾ. ಜಿ. ಶಂಕರ್‌ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಾಹಿತಿ ನರೇಂದ್ರ ಕುಮಾರ್ ಕೋಟ, ರಂಗಕರ್ಮಿ ಶಶಿರಾಜ್‌ ರಾವ್ ಕಾವೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿದೇಶಕಿ ಪೂರ್ಣಿಮಾ, ಎಂಜಿಎಂ ಕಾಲೇಜಿನ ಪ್ರೊ| ಲಕ್ಷ್ಮೀ ನಾರಾಯಣ ಕಾರಂತ ಉಪಸ್ಥಿತರಿರಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ರಂಗಭೂಮಿ ಉಪಾಧ್ಯಕ್ಷರಾದ ಎನ್. ರಾಜ್ ಗೋಪಾಲ್ ಬಲ್ಲಾಳ್, ಭಾಸ್ಕರ ರಾವ್ ಕಿದಿಯೂರು, ಜೊತೆ ಕಾರ್ಯದರ್ಶಿ ಶ್ರೀಪಾದ ಹೆಗಡೆ ಉಪಸ್ಥಿತರಿದ್ದರು.

Ad
Ad
Nk Channel Final 21 09 2023
Ad