ಉಡುಪಿ: ಪತಿಯ ಅಗಲುವಿಕೆಯಿಂದ ಮನನೊಂದ ಅಂಗನವಾಡಿ ಟೀಚರ್ ಒಬ್ಬರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರಿನಲ್ಲಿ ನಡೆದಿದೆ.
Ad
ಮಿಯ್ಯಾರು ಅಂಗನವಾಡಿ ಕಾರ್ಯಕರ್ತೆ ಸೌಮ್ಯ (40) ಆತ್ಮಹತ್ಯೆ ಮಾಡಿಕೊಂಡವರು. ಇವರು ಇಂದು ಬೆಳಿಗ್ಗೆ ಮಿಯ್ಯಾರಿನ ತನ್ನ ಮನೆಯ ಬಾವಿಗೆ ಹಾರಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 20 ವರ್ಷಗಳಿಂದ ಮಿಯ್ಯಾರು ಅಂಗನವಾಡಿಯಲ್ಲಿ ಕಾರ್ಯಕರ್ತೆಯಾಗಿ ಕಾರ್ಯನಿರ್ವಹಿಸಿದ್ದ ಅವರು ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲೂ ಸಕ್ರಿಯರಾಗಿದ್ದರು.
Ad
ಸೌಮ್ಯ ಅವರ ಪತಿ ಸಂತೋಷ್ ಪೂಜಾರಿ ಅವರು ಎರಡು ತಿಂಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಆ ಬಳಿಕ ಸೌಮ್ಯ ಅವರು ತೀವ್ರ ಮನನೊಂದಿದ್ದು, ಇದರಿಂದ ಅನಾರೋಗ್ಯಕ್ಕೂ ತುತ್ತಾಗಿದ್ದರು. ಇದೇ ಕಾರಣದಿಂದ ಮನನೊಂದು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ದಂಪತಿ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
Ad
Ad