ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ವಾರ್ಷಿಕ ಸಪ್ತೋತ್ಸವವು ಆರಂಭಗೊಂಡಿತು. ಇದರ ಅಂಗವಾಗಿ ಮಧ್ವ ಸರೋವರದಲ್ಲಿ ಆಕರ್ಷಕ ತೆಪ್ಪದಲ್ಲಿ ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ಉತ್ಸವ ಮೂರ್ತಿಯನ್ನಿಟ್ಟು , ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ, ಪುತ್ತಿಗೆ ಮಠದ ಕಿರಿಯ ಶ್ರೀಪಾದರಾದ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಆರತಿಯನ್ನು ಮಾಡಿದರು.

ನಂತರ ವೈಭವದ ತೆಪ್ಪೋತ್ಸವವು ಜರುಗಿತು. ಅನಂತರ ರಥಬೀದಿಯಲ್ಲಿ ಶ್ರೀ ಕೃಷ್ಣ ಮುಖ್ಯಪ್ರಾಣ ಹಾಗೂ ಶ್ರೀ ಅನಂತೇಶ್ವರ ಚಂದ್ರಮೌಳೇಶ್ವರ ದೇವರ ಉತ್ಸವ ಮೂರ್ತಿಯನ್ನಿಟ್ಟು ಎರಡು ರಥಗಳ ರಥೋತ್ಸವವು ಅತ್ಯಂತ ವೈಭವದಿಂದ ನಡೆಯಿತು. ಆಕರ್ಷಕ ಸುಡುಮದ್ದು ಪ್ರದರ್ಶನ, ವಾದ್ಯ ಸೇವೆಯೊಂದಿಗೆ ಅತ್ಯಂತ ವೈಭವದಿಂದ ರಥೋತ್ಸವವು ಜರುಗಿತು .