ಉಡುಪಿ: ಜಿಲ್ಲೆಯ ಸಾರ್ವಜನಿಕರು ಕೆಲಸದ ನಿಮಿತ್ತ ಅಥವಾ ಪ್ರವಾಸಕ್ಕಾಗಿ ತಮ್ಮ ಮನೆಯನ್ನು ಲಾಕ್ ಮಾಡಿ ಹೊರಗೆ ಹೋದಾಗ ಪೊಲೀಸರು ನಿಮ್ಮ ಮನೆಗೆ ಸುರಕ್ಷಿತೆ ಒದಗಿಸಲಿದ್ದಾರೆ. ಅಂತಹ ಮನೆಗಳ ಮೇಲೆ ನಿಗಾ ಇಡಲು ಉಡುಪಿ ಜಿಲ್ಲಾ ಪೊಲೀಸ್‌ ವತಿಯಿಂದ ಲಾಕ್ಡ್ ಹೌಸ್ ಬೀಟ್ ಸಿಸ್ಟಮ್’ (LHBS) ಎನ್ನುವ ವಿನೂತನ ಕಾರ್ಯಕ್ರಮವನ್ನು ಆರಂಭಿಸಿದೆ ಅಂತ ಎಸ್ಪಿ ಹರಿರಾಂ ಶಂಕರ್ ಹೇಳಿದ್ದಾರೆ.

ನೀವೇನು ಮಾಡಬೇಕು?

ಲಾಕ್‌ ಆಗಿರುವ ಮನೆಗಳ ಮೇಲೆ ಪೊಲೀಸರು ವಿಶೇಷ ನಿಗಾ ಇರಿಸುತ್ತಾರೆ. ಸದರಿ ಮನೆ ಇರುವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಯಾ ಠಾಣಾ ಬೀಟ್ ಸಿಬ್ಬಂದಿಯು ಆ ಮನೆಗೆ ಭೇಟಿ ನೀಡಿ ರಾತ್ರಿ ಮತ್ತು ಹಗಲು ವೇಳೆ ಆ ಮನೆಯ ಸೂಕ್ತ ಭದ್ರತೆ ಮತ್ತು ಸುರಕ್ಷತೆಯನ್ನು ಖಚಿತಪಡಿಸುತ್ತಾರೆ.

ಆದ್ದರಿಂದ ಉಡುಪಿ ಜಿಲ್ಲೆಯ ಯಾವುದೇ ಸಾರ್ವಜನಿಕರು ತಾವು ಮನೆಯಿಂದ ಪ್ರವಾಸ ಮತ್ತು ಇತರೇ ಕಾರ್ಯಕ್ರಮಗಳಿಗಾಗಿ ಮನೆಯನ್ನು ಲಾಕ್‌ ಮಾಡಿ ಹೊರಡುವಾಗ ಉಡುಪಿ ಜಿಲ್ಲಾ ನಿಯಂತ್ರಣ ಕೊಠಡಿಯಲ್ಲಿ ಈ ಬಗ್ಗೆ ನೀಡಲಾದ ವಿಶೇಷ ದೂರವಾಣಿ ಸಂಖ್ಯೆ 0820-2526709 ಕರೆ ಮಾಡಿ ಮಾಹಿತಿಯನ್ನು ನೀಡಬೇಕು.

ನಿಯಂತ್ರಣ ಕೊಠಡಿಯಿಂದ ನೀಡುವ ವಾಟ್ಸಾಪ್ ಸಂಖ್ಯೆಗೆ ಮನೆಯಿಂದ ತೆರಳುವ ಮತ್ತು ಮರಳಿ ಬರುವ ದಿನಾಂಕ ಹಾಗೂ ಸಮಯ, ಮನೆಯ ನಿಖರವಾದ ವಿಳಾಸ ಹಾಗೂ ಮನೆಯ ಮುಂಭಾಗ ನಿಂತು ತೆಗೆದ ಒಂದು ಸೆಲ್ಫಿ ಫೋಟೋವನ್ನು ನೀಡಬೇಕು.

ನಂತರ ಜಿಲ್ಲಾ ನಿಯಂತ್ರಣ ಕೊಠಡಿಯಿಂದ ಈ ಬಗ್ಗೆ ಸಂಬಂಧಿತ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿ, ಆ ಮನೆಯ ವ್ಯಾಪ್ತಿಯ ಬೀಟ್‌ ಸಿಬ್ಬಂದಿ ಯವರಿಗೆ ನೀಡಲಾಗುವುದು. ನಂತರ ಈ ಮನೆಯನ್ನು ವಾಟ್ಸಾಪ್ ವಿವರದಲ್ಲಿ ನೀಡಲಾದ ನಿಗದಿತ ದಿನಾಂಕ ಮತ್ತು ಸಮಯದ ವರೆಗೆ ಆ ಮನೆಯ ಭದ್ರತೆ ಮತ್ತು ಸುರಕ್ಷತೆಯನ್ನು ಖಚಿತಪಡಿಸುತ್ತಾರೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

View this post on Instagram

A post shared by News Karnataka (@newskarnataka)