ಉಡುಪಿ: ಮರವಂತೆ ಬೀಚ್‌ನಲ್ಲಿ ವಾಹನಗಳ ಪಾಕಿಂìಗ್‌ ವ್ಯವಸ್ಥೆ ಹಾಗೂ ಆಹಾರ ಮಳಿಗೆಗಳ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ್‌ ವಿಧಾನಸಭೆಯಲ್ಲಿ ಉತ್ತರಿಸಿದರು.

ಶಾಸಕ ಗುರುರಾಜ್‌ ಗಂಟಿಹೊಳೆ ಮರವಂತೆ ಬೀಚ್‌ನಲ್ಲಿ ಸೂಕ್ತ ಪಾರ್ಕಿಂಗ್ ಸೌಲಭ್ಯ ಕಲ್ಪಿಸುವಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಲ್ಲಿ ಪ್ರವಾಸೋ ದ್ಯಮ ಇಲಾಖೆಯ ಜಮೀನಿನಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ಹಾಗೂ ಆಹಾರ ಮಳಿಗೆಗಳ ದುರಸ್ತಿ ಕಾಮಗಾರಿ ಕೈಗೊಳ್ಳಲು 39.50 ಲಕ್ಷ ರೂ.

ಅಂದಾಜು ಪಟ್ಟಿ ಸಲ್ಲಿಸಿದ್ದು 2023-24ನೇ ಸಾಲಿನಲ್ಲಿ ಅನುದಾನದ ಕೊರತೆಯಿಂದ ಈ ಕಾಮಗಾರಿ ಕೈಗೆತ್ತಿಕೊಳ್ಳಲು ಸಾಧ್ಯವಾಗಿಲ್ಲ. ಅನುದಾನ ಲಭ್ಯತೆಯನುಸಾರ ಪರಿಶೀಲಿಸಲಾಗುವುದು ಎಂದರು.