Bengaluru 27°C

ಬ್ರಹ್ಮಾವರ: ಕಾಡು ಪ್ರಾಣಿಗಳ ಬೇಟೆಗೆ ಯತ್ನ: ಮೂವರ ಬಂಧನ

ಕಾಡುಪ್ರಾಣಿಗಳನ್ನು ಬೇಟೆಯಾಡಲು ಸಂಚು ರೂಪಿಸಿ ಅರಣ್ಯದೊಳಗೆ ಪ್ರವೇಶಿಸಿದ್ದ ಭಟ್ಕಳ, ಶಿರೂರು ಮೂಲದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ ಘಟನೆ ಬ್ರಹ್ಮಾವರ ತಾಲೂಕಿನ ವಂಡಾರು ಬಳಿ ನಡೆದಿದೆ.

ಉಡುಪಿ: ಕಾಡುಪ್ರಾಣಿಗಳನ್ನು ಬೇಟೆಯಾಡಲು ಸಂಚು ರೂಪಿಸಿ ಅರಣ್ಯದೊಳಗೆ ಪ್ರವೇಶಿಸಿದ್ದ ಭಟ್ಕಳ, ಶಿರೂರು ಮೂಲದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ ಘಟನೆ ಬ್ರಹ್ಮಾವರ ತಾಲೂಕಿನ ವಂಡಾರು ಬಳಿ ನಡೆದಿದೆ.


ಭಟ್ಕಳ ಮುಂಡಳ್ಳಿಯ ಮೊಹಮ್ಮದ್ ಅಶ್ರಫ್ ಯಾನೆ ಮಾವಿಯ (23), ಶಿರೂರು ಮೂಲದವರಾದ ವಾಸೀಂ ಅಕ್ರಂ (34), ಅಲಿ ಬಾಪು ಯಾಸಿನ್ (36) ಬಂಧಿತ ಆರೋಪಿಗಳು. ಬಂಧಿತರಿಂದ ಒಂದು ಬಂದೂಕು, 11 ಕಾಡತೂಸು 4 ಹರಿತವಾದ ಚಾಕುಗಳು, ಒಂದು ಮಾಂಸ ಮಾಡಲು ಉಪಯೋಗಿಸುವ ಮಚ್ಚು, ಟಾರ್ಚ್ ಹಾಗೂ ಮೂರು ಮೊಬೈಲ್ ಫೋನ್ ಸಹಿತ ಆರೋಪಿಗಳು ಬಳಸಿದ್ದ ಆಟೋರಿಕ್ಷಾ ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.


ಕಾರ್ಯಾಚರಣೆಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ಡಿ. ದಿನೇಶ್, ಪ್ರಕಾಶ್ ಪೂಜಾರಿ, ವಲಯ ಅರಣ್ಯಾಧಿ ಕಾರಿಗಳಾದ ಜ್ಯೋತಿ, ಸಂದೇಶ್ ಕುಮಾರ್, ಗಣಪತಿ ವಿ ನಾಯ್ಕ್ ಹಾಗೂ ಶಂಕರನಾರಾಯಣ ವಲಯ ಸಿದ್ದಾಪುರ ವನ್ಯಜೀವಿ ವಲಯ ಆಗುಂಬೆ ವನ್ಯಜೀವಿ ವಲಯದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.


Nk Channel Final 21 09 2023