ಉಡುಪಿ: ಉಡುಪಿಯ ಪೇಜಾವರ ಶ್ರೀಗಳಿಗೆ ಭೀಮ್ ಆರ್ಮಿ ಮುಖಂಡನೊಬ್ಬ ಅವಾಚ್ಯವಾಗಿ ನಿಂದಿಸಿ, ಜೀವ ಬೆದರಿಕೆಯೊಡ್ಡಿದ್ದಾನೆ. ಈ ಕುರಿತ ವಿಡಿಯೋ ಇದೀಗ ವೈರಲ್ ಆಗಿದೆ.
ಇತ್ತೀಚೆಗೆ ಶ್ರೀಗಳು ಸಂವಿಧಾನ ಬದಲಾವಣೆ ಕುರಿತು ಮಾತನಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಖುದ್ದು ಶ್ರೀಗಳೇ ಈ ಆರೋಪವನ್ನು ಅಲ್ಲಗಳೆದಿದ್ದರು. ಇದಾಗಿ ತಿಂಗಳು ಕಳೆದಿದೆ. ಇಷ್ಟಾದರೂ, ಭೀಮ್ ಆರ್ಮಿ ಸಂಘಟನೆಯ ಮತಿನ್ ಕುಮಾರ್ ಬಿಜಾಪುರ ಎಂಬಾತ ಶ್ರೀಗಳ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾನೆ.
ಇಲ್ಲಿ ಬರೆಯಲೂ ಆಗದ ಪದವನ್ನು ಆರೋಪಿ ಬಳಸಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಪೇಜಾವರ ಶ್ರೀಗಳನ್ನು ಏಕವಚನದಲ್ಲಿ ಅವಾಚ್ಯವಾಗಿ ನಿಂದಿಸಿ ಹಿಂದೂ ಧರ್ಮದ ನಿಂದನೆ ಮಾಡಿದ್ದನ್ನು ಹಿಂದೂ ಜಾಗರಣ ವೇದಿಕೆ ಖಂಡಿಸಿದ್ದು ಉಡುಪಿ ನಗರದಲ್ಲಿ ದೂರು ದಾಖಲಿಸಿದೆ.

