ಉಡುಪಿ: ಕಾರಿಗೆ ಬೈಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಪಲ್ಟಿಯಾಗಿ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಸಂಭವಿಸಿದೆ. ಬೈಕ್ ಸವಾರ ಹಾರಿ ರಸ್ತೆಗೆ ಬೀಳುವ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕಾರು ಚಾಲಕ ನಿರ್ಲಕ್ಷ್ಯತನದಿಂದ ಒಮ್ಮೇಲೆ ಕಾರನ್ನು ಯೂಟರ್ನ್ ತೆಗೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ಹಿಂದಿನಿಂದ ರಭಸವಾಗಿ ಬಂದ ಬೈಕ್ ಸವಾರ ಕಾರಿಗೆ ಡಿಕ್ಕಿ ಹೊಡೆದು, ಡಿವೈಡರ್ ಮಧ್ಯೆ ಹಾರಿ ಬಿದ್ದಿದ್ದಾನೆ. ರಸ್ತೆಗೆ ಬಿದ್ದ ರಭಸಕ್ಕೆ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ ಎನ್ನಲಾಗಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

