Bengaluru 22°C

ಪೆರ್ಡೂರು: ರಸ್ತೆ ಬದಿಯ ಮರಕ್ಕೆ ಬೈಕ್ ಡಿಕ್ಕಿ; ಸವಾರ ಮೃತ್ಯು

ರಸ್ತೆ ಬದಿಯ ಮರಕ್ಕೆ ಬೈಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಬೈರಂಪಳ್ಳಿ ಗ್ರಾಮದ ದೂಪದಕಟ್ಟೆ ಚೌಡೇಶ್ವರಿ ದೇವಸ್ಥಾನದ ಬಳಿ ಜ.6ರಂದು ಮಧ್ಯಾಹ್ನ ವೇಳೆ ನಡೆದಿದೆ.

ಉಡುಪಿ: ರಸ್ತೆ ಬದಿಯ ಮರಕ್ಕೆ ಬೈಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಬೈರಂಪಳ್ಳಿ ಗ್ರಾಮದ ದೂಪದಕಟ್ಟೆ ಚೌಡೇಶ್ವರಿ ದೇವಸ್ಥಾನದ ಬಳಿ ಜ.6ರಂದು ಮಧ್ಯಾಹ್ನ ವೇಳೆ ನಡೆದಿದೆ.


ಮೃತರನ್ನು ಸಂತೋಷ್ (28) ಎಂದು ಗುರುತಿಸಲಾಗಿದೆ. ಪೆರ್ಡೂರು ಕಡೆಯಿಂದ ಹರಿಖಂಡಿಗೆ ಕಡೆಗೆ ಹೋಗುತ್ತಿದ್ದ ಬೈಕ್, ಸವಾರನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿರುವ ಮರಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.


ಇದರಿಂದ ಗಂಭೀರವಾಗಿ ಗಾಯಗೊಂಡ ಸವಾರ ಸಂತೋಷ್ ಹಿರಿಯಡಕ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Nk Channel Final 21 09 2023