Bengaluru 22°C
Ad

ನೈರುತ್ಯ ಪದವೀಧರ ಕ್ಷೇತ್ರದ ಮತ ಎಣಿಕೆ : ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿಗೆ ಭಾರೀ ಮುನ್ನಡೆ

ರುತ್ಯ ಪದವೀಧರ ಕ್ಷೇತ್ರದ ಮತ ಎಣಿಕೆ ಈಗಾಗಲೇ ಆರಂಭಗೊಂಡಿದ್ದು ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿಗೆ ಭಾರೀ ಮುನ್ನಡೆಯನೈಲ್ಲಿದ್ದಾರೆ.

ಉಡುಪಿ:   ನೈರುತ್ಯ ಪದವೀಧರ ಕ್ಷೇತ್ರದ ಮತ ಎಣಿಕೆ ಈಗಾಗಲೇ ಆರಂಭಗೊಂಡಿದ್ದು ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿಗೆ ಭಾರೀ ಮುನ್ನಡೆಯಲ್ಲಿದ್ದಾರೆ. ಕಾಂಗ್ರೆಸ್‌ನ ಆಯನೂರು ಮಂಜುನಾಥ ಹಾಗೂ ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್ ಗೆ ಹಿನ್ನಡೆ ಸಾಧಿಸಿದ್ದಾರೆ.

ಕರ್ನಾಟಕ ವಿಧಾನ ಪರಿಷತ್‌ನ ನೈರುತ್ಯ ಪದವೀಧರ ಕ್ಷೇತ್ರದ ಮತ ಎಣಿಕೆ ಕಾರ್ಯಗಳು ನಡೆಯುತ್ತಿದ್ದು, ಎರಡನೇ ಸುತ್ತಿನ ಮತ ಎಣಿಕೆ ಬಳಿಕ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಒಟ್ಟು 28000 ಮತಗಳ ಪೈಕಿ ಡಾ.ಧನಂಜಯ ಸರ್ಜಿ ಅವರು 14054, ಕಾಂಗ್ರೆಸ್‌ನ ಆಯನೂರು ಮಂಜುನಾಥ 4872 ಹಾಗೂ ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್ 4557 ಮತಗಳನ್ನು ಪಡೆದುಕೊಂಡಿದ್ದಾರೆ.

Ad
Ad
Nk Channel Final 21 09 2023
Ad