ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಭರ್ಜರಿ ಮುನ್ನಡೆ ಸಾಧಿಸಿದ್ಧಾರೆ. ಎರಡನೇ ಹಂತದ ಮತ ಎಣಿಕೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ 72972 ಮತಗಳನ್ನು ಪಡೆದು 29456 ಮತಗಳಿಂದ ಮುನ್ನಡೆ ಗಳಿಸಿದ್ದಾರೆ.
Ad
ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ43516 ಮತಗಳನ್ನು ಪಡೆದು ಹಿನ್ನಡೆಯಲ್ಲಿ ಇದ್ದಾರೆ. ಇನ್ನು ಇಂದು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು ಅಮೃತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಕೆ ಮಾಡಿದ್ದಾರೆ. ಕೋಟ, ಪತ್ನಿ ಶಾಂತಾ ಜೊತೆ ಬಂದು ಪೂಜೆ ಸಲ್ಲಿಸಿ, ಬಳಿಕ ಗ್ರಾಮದೇವರ ಗುಡಿಗೆ ತೆರಳಿ ಪೂಜೆ ಸಲ್ಲಿಸಿದ್ದಾರೆ.
Ad
Ad