Bengaluru 23°C
Ad

ಟಿಪ್ಪ‌ರ್ ಡಿಕ್ಕಿ ಹೊಡೆದು ಬಿಎಸ್ಸಿ ವಿದ್ಯಾರ್ಥಿ ಮೃತ್ಯು

ಕಾಲೇಜ್ ಮುಗಿಸಿ ಸ್ನೇಹಿತರೊಂದಿಗೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಹಿಂದಿನಿಂದ ಬಂದ ಟಿಪ್ಪ‌ರ್ ಡಿಕ್ಕಿ ಹೊಡೆದು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಟೇಶ್ವರ ಪ್ರಥಮ ದರ್ಜೆ ಕಾಲೇಜು ಸಮೀಪ ಕೋಟೇಶ್ವರ ಹಾಲಾಡಿ ರಸ್ತೆಯ ಕಕ್ಕೇರಿ ಎಂಬಲ್ಲಿ ಮಂಗಳವಾರ ನಡೆದಿದೆ. ಮೃತ ವಿದ್ಯಾರ್ಥಿಯನ್ನು ನಾಗೂರು ನಿವಾಸಿ ಪ್ರಸ್ತುತ ಕೋಟೇಶ್ವರದ ಕಾಳಾವರ ವರದರಾಜ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಧನುಷ್ ಎಂದು ಗುರುತಿಸಲಾಗಿದೆ.

ಉಡುಪಿ: ಕಾಲೇಜ್ ಮುಗಿಸಿ ಸ್ನೇಹಿತರೊಂದಿಗೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಹಿಂದಿನಿಂದ ಬಂದ ಟಿಪ್ಪ‌ರ್ ಡಿಕ್ಕಿ ಹೊಡೆದು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಟೇಶ್ವರ ಪ್ರಥಮ ದರ್ಜೆ ಕಾಲೇಜು ಸಮೀಪ ಕೋಟೇಶ್ವರ ಹಾಲಾಡಿ ರಸ್ತೆಯ ಕಕ್ಕೇರಿ ಎಂಬಲ್ಲಿ ಮಂಗಳವಾರ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ನಾಗೂರು ನಿವಾಸಿ ಪ್ರಸ್ತುತ ಕೋಟೇಶ್ವರದ ಕಾಳಾವರ ವರದರಾಜ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಧನುಷ್ ಎಂದು ಗುರುತಿಸಲಾಗಿದೆ.

ಧನುಷ್ ತನ್ನ ಇಬ್ಬರು ಸ್ನೇಹಿತರೊಂದಿಗೆ ಕಾಲೇಜು ಮುಗಿಸಿ ಕೋಟೇಶ್ವರದತ್ತ ರಸ್ತೆ ಬದಿಯ ಇಂಟರ್ ಲಾಕ್ ಮೇಲೆ ನಡೆದುಕೊಂಡು ಬರುತ್ತಿದ್ದ. ಅತೀ ವೇಗವಾಗಿ ಹಿಂದಿನಿಂದ ಬಂದ ಶ್ರೀ ಮಹಾಗಣಪತಿ ಪ್ರಸನ್ನ ಎಂಬ ಹೆಸರಿನ ಟಿಪ್ಪ‌ರ್ ಎದುರಿನಿಂದ ಬರುತ್ತಿದ್ದ ಕಾರನ್ನು ತಪ್ಪಿಸಲು ತೀರಾ ಬಲಬದಿಗೆ ಬಂದು ಧನುಷ್ ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಧನುಷ್ ಲಾರಿಯಡಿಗೆ ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad
Ad
Nk Channel Final 21 09 2023