Bengaluru 30°C

ಉಡುಪಿಯಲ್ಲಿ ವೈದ್ಯರಿಂದ ಕ್ಯಾಂಡೆಲ್ ಹಿಡಿದು ಮೌನ ಮೆರವಣಿಗೆ

ಕೊಲ್ಕತ್ತಾದಲ್ಲಿನ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಖಂಡಿಸಿ ರಾಷ್ಟ್ರೀಯ ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಶಾಖೆಯ ನೇತೃತ್ವದಲ್ಲಿ ವಿವಿಧ ಸಮಾನ ಮನಸ್ಕ ಸಂಘಟನೆಗಳ ಸಹಯೋಗದೊಂದಿಗೆ ಉಡುಪಿ ನಗರದಲ್ಲಿ ಮೌನ ಮೆರವಣಿಗೆ ನಡೆಸಲಾಯಿತು.

ಉಡುಪಿ: ಕೊಲ್ಕತ್ತಾದಲ್ಲಿನ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಖಂಡಿಸಿ ರಾಷ್ಟ್ರೀಯ ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಶಾಖೆಯ ನೇತೃತ್ವದಲ್ಲಿ ವಿವಿಧ ಸಮಾನ ಮನಸ್ಕ ಸಂಘಟನೆಗಳ ಸಹಯೋಗದೊಂದಿಗೆ ಉಡುಪಿ ನಗರದಲ್ಲಿ ಮೌನ ಮೆರವಣಿಗೆ ನಡೆಸಲಾಯಿತು.


ಉಡುಪಿ ಬೋರ್ಡ್ ಹೈಸ್ಕೂಲ್ ಬಳಿಯಿಂದ ವೈದ್ಯರು, ದಂತ ವೈದ್ಯರು, ವೈದ್ಯಕೀಯ ವಿದ್ಯಾರ್ಥಿನಿಯರು, ನರ್ಸಿಂಗ್ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಕೈಯಲ್ಲಿ ಕ್ಯಾಂಡೆಲ್ ಹಿಡಿದು, ಕಪ್ಪು ಪಟ್ಟಿ ಧರಿಸಿಕೊಂಡು ಜೋಡುಕಟ್ಟೆಯವರೆಗೆ ಮೌನ ಮೆರವಣಿಗೆ ನಡೆಸಿದರು.


ಸ (1)

ಈ ಸಂದರ್ಭದಲ್ಲಿ ಐಎಂಎ ಉಡುಪಿ ಕರಾವಳಿ ಅಧ್ಯಕ್ಷೆ ಡಾ.ರಾಜಲಕ್ಷ್ಮೀ, ಪ್ರಧಾನ ಕಾರ್ಯದರ್ಶಿ ಡಾ.ಅರ್ಚನಾ ಭಕ್ತ, ಮಾಜಿ ಅಧ್ಯಕ್ಷ ಡಾ.ಪಿ.ವಿ. ಭಂಡಾರಿ, ಜಿಲ್ಲಾ ಸಂಯೋಜಕ ಡಾ.ವಾಸುದೇವ, ದಂತ ವೈದ್ಯರ ಸಂಘದ ಡಾ.ವಿಜಯೇಂದ್ರ ವಸಂತ್, ಆದರ್ಶ್ ಆಸ್ಪತ್ರೆಯ ವೈಧ್ಯಕೀಯ ನಿರ್ದೇಶಕ ಡಾ.ಜಿ.ಎಸ್.ಚಂದ್ರಶೇಖರ್, ಡಾ.ಹರೀಶ್ಚಂದ್ರ, ಡಾ.ಅಶೋಕ್ ಕುಮಾರ್ ಕಾಮತ್ ಮೊದಲಾದವರು ಉಪಸ್ಥಿತರಿದ್ದರು.


Nk Channel Final 21 09 2023