ಉಡುಪಿ: ನೆಲ್ಲಿಕಾರು-ಕಾರ್ಕಳ ಮುಖ್ಯ ರಸ್ತೆಯಲ್ಲಿ ಹೊಸ್ಮಾರು ಕಡೆಗೆ ಸಾಗುತ್ತಿದ್ದ ಗೂಡ್ಸ್ ಟೆಂಪೋ ಮತ್ತು ಎದುರಿನಿಂದ ಬರುತ್ತಿದ್ದ ಕಾರು ಮುಖಾಮುಖಿ ಢಿಕ್ಕಿ ಹೊಡೆದು ಮೂವರು ಗಾಯಗೊಂಡಿದ್ದಾರೆ.

ಟೆಂಪೋ ಚಾಲಕ ಕೃಷ್ಣರಾಜ್, ಕಾರು ಚಾಲಕ ಲಲಿತೇಶ್ ಗೌಡ ಹಾಗೂ ಬಾಲಕ ಪ್ರವೀಣ್ ಗಾಯಗೊಂಡವರು. ಕಾರು ಹಾಗೂ ಟೆಂಪೋ ಎರಡೂ ಜಖಂಗೊಂಡಿವೆ.

ಗೂಡ್ಸ್ ಟೆಂಪೋದಲ್ಲಿ ಕಾರ್ಕಳ ಕಡೆಯಿಂದ ಮನೆ ಖಾಲಿ ಮಾಡಿ ಸಾಮಗ್ರಿಗಳನ್ನು ಸ್ಥಳಾಂತರಿಸಲು ತೆರಳುತ್ತಿದ್ದ ಕುಟುಂಬ ಪ್ರಯಾಣಿಸುತ್ತಿತ್ತು. ಗಾಯಾಳುಗಳನ್ನು ಉಡುಪಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.