ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಸಿಮೆಂಟ್ ಮಿಕ್ಸರ್ ಲಾರಿಯೊಂದು ಎರಡು ಲಾರಿಗಳಿಗೆ ಡಿಕ್ಕಿ ಹೊಡೆದ ಘಟನೆ ಮಣಿಪಾಲದ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ.

ಅತಿವೇಗವಾಗಿ ಬಂದ ಆರ್‌ಎಂಸಿ ಸಿಮೆಂಟ್ ಮಿಕ್ಸರ್ ಲಾರಿ, ಅದೇ ಕಂಪನಿಗೆ ಸೇರಿದ ಲಾರಿಗೆ ಮೊದಲು ಡಿಕ್ಕಿ ಹೊಡೆದಿದೆ. ಬಳಿಕ ಮತ್ತೊಂದು ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಮಿಕ್ಸರ್ ಲಾರಿಯ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಅಪಘಾತದಲ್ಲಿ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

View this post on Instagram

A post shared by News Karnataka (@newskarnataka)