Bengaluru 21°C
Ad

ನ.17, 18 ರಂದು ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಮಹೋತ್ಸವ

ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಮಹೋತ್ಸವ ಕಾರ್ಯಕ್ರಮವು ಇದೇ ನ.17 ಮತ್ತು ನ.18 ರಂದು ಉಡುಪಿ ನ್ಯಾಯಾಲಯದ ಆವರಣದಲ್ಲಿ ವಿಜೃಂಭಣೆಯಿಂದ ನಡೆಯಲಿದೆ ಎಂದು ಶತಮಾನೋತ್ತರ ರಜತ ಮಹೋತ್ಸವ ಸಮಿತಿಯ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ ತಿಳಿಸಿದರು.

ಉಡುಪಿ: ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಮಹೋತ್ಸವ ಕಾರ್ಯಕ್ರಮವು ಇದೇ ನ.17 ಮತ್ತು ನ.18 ರಂದು ಉಡುಪಿ ನ್ಯಾಯಾಲಯದ ಆವರಣದಲ್ಲಿ ವಿಜೃಂಭಣೆಯಿಂದ ನಡೆಯಲಿದೆ ಎಂದು ಶತಮಾನೋತ್ತರ ರಜತ ಮಹೋತ್ಸವ ಸಮಿತಿಯ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ ತಿಳಿಸಿದರು.

Ad

ಉಡುಪಿ ಟೌಲ್ ಹಾಲ್ ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ. 17ರಂದು ಬೆಳಗ್ಗೆ 10 ಗಂಟೆಗೆ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಅರವಿಂದ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶ ಎನ್.ವಿ ಅಂಜಾರಿಯ ಅಧ್ಯಕ್ಷತೆ ವಹಿಸಲಿದ್ದಾರೆ. ಆಂಧ್ರ ಪ್ರದೇಶದ ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಸಾಹೇಬ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

Ad

ಹೈಕೋರ್ಟ್ ನ್ಯಾಯಾಧೀಶ ಮತ್ತು ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶ ಇ.ಎಸ್. ಇಂದ್ರೇಶ್ ಅವರು 125ರ ಸಂಭ್ರಮದ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಕಾನೂನು ಸಚಿವ ಎಚ್.ಕೆ. ಪಾಟೀಲ್, ಸಾರ್ವಜನಿಕ ಸೇವಾ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ, ಅಡ್ವಕೇಟ್ ಜನರಲ್ ಶಶಿಕಿರಣ್ ಎಸ್. ಶೆಟ್ಟಿ, ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್. ಭರತ್ ಕುಮಾರ್, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣನವರ್ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಹೈಕೋರ್ಟ್ ನ್ಯಾಯಾಧೀಶರಾದ ಎಂ.ಜಿ. ಉಮಾ, ರಾಮಚಂದ್ರ ಡಿ. ಹುದ್ದಾರ್ ಹಾಗೂ ಟಿ. ವೆಂಕಟೇಶ್ ನಾಯ್ಕ್ ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.

Ad

ಹೈಕೋರ್ಟ್ ವಕೀಲ ಮಧುಕರ್ ದೇಶಪಾಂಡೆ ‘Evidence Act and Application of Electronic Evidence” ಮತ್ತು ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ್ ಅವರು “Drafting of Pleadings & Advocacy’ ವಿಷಯಗಳ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ. ಸಂಜೆ 5ಗಂಟೆಯ ಬಳಿಕ ವೈಕುಂಠ ಬಾಳಿಗೆ ಕಾನೂನು ಕಾಲೇಜು ಹಾಗೂ ಉಡುಪಿ, ಕಾರ್ಕಳ, ಕುಂದಾಪುರ ಮತ್ತು ಉಡುಪಿ ವಕೀಲರ ಸಂಘದವರು ವಿವಿಧ ಮನೋರಂಜನಾ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಬಳಿಕ ಕಲಾಮಯಂ ಉಡುಪಿ ತಂಡದಿಂದ ಜಾನಪದ ನೃತ್ಯ ವೈಭವ ನಡೆಯಲಿದೆ ಎಂದು ಮಾಹಿತಿ ನೀಡಿದರು.

Ad

ನ. 18ರಂದು ಬೆಳಿಗ್ಗೆ 10ಗಂಟೆಗೆ “Cyber crimes and law relating to Information Technology” ವಿಷಯದಲ್ಲಿ ಹೈಕೋರ್ಟ್ ನ್ಯಾಯಧೀಶ ಸಿ.ಎಂ. ಜೋಷಿ ಮತ್ತು “Art of Cross Examination and Appreciation of Evidence” ಹೈಕೋರ್ಟ್ ವಕೀಲ ಎಸ್. ಶಂಕರಪ್ಪ ವಿಚಾರ ಮಂಡನೆ ಮಾಡಲಿದ್ದಾರೆ. ಮಧ್ಯಾಹ್ನ 2.30ರಿಂದ ಪ್ರಾಣೇಶ್ ಗಂಗಾವತಿ ತಂಡದಿಂದ “ನಗೆ ಹಬ್ಬ” ಕಾರ್ಯಕ್ರಮ ನಡೆಯಲಿದೆ. ಸಂಜೆ 4.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಹೈಕೋರ್ಟ್ ನ್ಯಾಯಾಧೀಶ ಎಸ್. ವಿಶ್ವಜಿತ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಹೈಕೋರ್ಟ್ ನ್ಯಾಯಾಧೀಶ ಇ.ಎಸ್. ಇಂದಿರೇಶ್ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದು ಹೇಳಿದರು.

Ad

ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ಮಾತನಾಡಿ, ನ.17ರಂದು ಬೆಳಿಗ್ಗೆ 9.30 ಕ್ಕೆ ನಗರದ ಜೋಡುಕಟ್ಟೆಯಿಂದ ಅತಿಥಿಗಳನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಗುವುದು. ಉಡುಪಿ ಜಿಲ್ಲೆಯ ಎಲ್ಲಾ ವಕೀಲರು, ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಅದ್ದೂರಿ ಮೆರವಣಿಗೆಯೊಂದಿಗೆ ಅತಿಥಿಗಳನ್ನು ನ್ಯಾಯಾಲಯದ ಆವರಣಕ್ಕೆ ಕರೆತರಲಾಗುವುದು. ಕಾರ್ಯಕ್ರಮಕ್ಕೆ ಈಗಾಗಲೇ ತಯಾರಿ ನಡೆಯುತ್ತಿದ್ದು, ವೇದಿಕೆ, ನ್ಯಾಯಾಲಯಕ್ಕೆ ವಿದ್ಯುತ್ ದೀಪಾಲಂಕಾರ ಕಾರ್ಯಗಳು ಭರದಿಂದ ಸಾಗುತ್ತಿದೆ. ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕಾರ್ಯಕ್ರಮದ ಮೆರಗನ್ನು ಹೆಚ್ಚಿಸಬೇಕು‌ ಎಂದರು.

Ad

ಸುದ್ದಿಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಧೀಶ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಆರ್.ಯೋಗೇಶ್, ಉಡುಪಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್ ಎ.ಆರ್, ಉಪಾಧ್ಯಕ್ಷ ಮಿತ್ರ ಕುಮಾರ್ ಶೆಟ್ಟಿ, ಜಂಟಿ ಕಾರ್ಯದರ್ಶಿ ಬೈಲೂರು ರವೀಂದ್ರ ದೇವಾಡಿಗ, ಖಜಾಂಚಿ ಗಂಗಾಧರ ಹೆಚ್.ಎಂ, ಸಾಂಸ್ಕೃತಿಕ ಕಾರ್ಯದರ್ಶಿ ಸಂತೋಷ್ ಕುಮಾರ್ ಮೂಡುಬೆಳ್ಳೆ, ವಕೀಲರ ಸಂಘ ವಿವಿಧ ಉಪ ಸಮಿತಿಗಳ ಮುಖ್ಯಸ್ಥರಾದ ಎಂ. ಶಾಂತಾರಾಮ್ ಶೆಟ್ಟಿ, ಅಸದುಲ್ಲಾ ಕಟಪಾಡಿ, ಎನ್.ಕೆ. ಆಚಾರ್ಯ, ಬಿ. ನಾಗರಾಜ್, ಆನಂದ ಮಡಿವಾಳ, ಸತೀಶ್ ಪೂಜಾರಿ, ಅಮೃತಕಲಾ, ಆರೂರು ಸುಕೇಶ್ ಶೆಟ್ಟಿ, ವಕೀಲರಾದ ಶಿವಾನಂದ್ ಆಮೀನ್ ಪಾಂಗಾಳ, ಶಶಿರಾಜ್ ಪೈಯ್ಯಾರ್, ಪ್ರಜ್ವಲ್ ಶೆಟ್ಟಿ, ಆಕಾಶ್ ಅಂಬಾಗಿಲು ಉಪಸ್ಥಿತರಿದ್ದರು.

Ad

 

Ad
Ad
Nk Channel Final 21 09 2023