Bengaluru 19°C

ಮೈಕ್ರೋ ಫೈನಾನ್ಸ್ ಗಳ ಮೇಲೆ ಕ್ರಮಕೈಗೊಳ್ಳಲು ಕೇಂದ್ರ ಸರಕಾರ ವಿಫಲ: ಸಚಿವ ಕೃಷ್ಣಭೈರೇಗೌಡ ವಾಗ್ದಾಳಿ

ಮೈಕ್ರೋ ಫೈನಾನ್ಸ್ ಕಂಪೆನಿಗಳು ಕೇಂದ್ರ ಸರಕಾರದ ಅಡಿಯಲ್ಲಿ ಬರುತ್ತವೆ. ಅವರ ಮೇಲೆ ಕ್ರಮಕೈಗೊಳ್ಳಲು ಕೇಂದ್ರ ಸರಕಾರ ವಿಫಲ ಆಗಿರುವುದರಿಂದ ರಾಜ್ಯ ಸರಕಾರ ಮಧ್ಯಪ್ರವೇಶಿಸಿ ಜನರ ರಕ್ಷಣೆಗೆ ಹೆಜ್ಜೆ ಇಟ್ಟಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದರು.

ಉಡುಪಿ: ಮೈಕ್ರೋ ಫೈನಾನ್ಸ್ ಕಂಪೆನಿಗಳು ಕೇಂದ್ರ ಸರಕಾರದ ಅಡಿಯಲ್ಲಿ ಬರುತ್ತವೆ. ಅವರ ಮೇಲೆ ಕ್ರಮಕೈಗೊಳ್ಳಲು ಕೇಂದ್ರ ಸರಕಾರ ವಿಫಲ ಆಗಿರುವುದರಿಂದ ರಾಜ್ಯ ಸರಕಾರ ಮಧ್ಯಪ್ರವೇಶಿಸಿ ಜನರ ರಕ್ಷಣೆಗೆ ಹೆಜ್ಜೆ ಇಟ್ಟಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದರು.


ಮೈಕ್ರೋ ಫೈನಾನ್ಸ್ ಉಪಟಳ ವಿಚಾರದಲ್ಲಿ ರಾಜ್ಯ ಸರ್ಕಾರ ಬಾಳೆಹಣ್ಣು ತಿಂತಾಯಿದೆಯಾ ಎಂಬ ರವಿಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಅವರು, ಕೇಂದ್ರ ಸರಕಾರ ಏನು ಚಳ್ಳೆಹಣ್ಣು ತಿನ್ತಾಯಿದೆಯಾ?. ಮೈಕ್ರೋ ಫೈನಾನ್ಸ್ ಕಂಪೆನಿಗಳು ಕೇಂದ್ರ ಸರಕಾರದ ಅಡಿಯಲ್ಲಿ ಬರುತ್ತವೆ. ಕೇಂದ್ರ ಸರಕಾರ ಕುರುಡಾಗಿದೆಯಾ?, ಕಿವಿ ಕೇಳ್ತಿಲ್ವಾ?. ಜನರ ಸಮಸ್ಯೆ ಅವರಿಗೆ ಕಾಣುತ್ತಿಲ್ವಾ ಎಂದು ಕಿಡಿಕಾರಿದರು.


ನಮ್ಮನ್ನು ಪ್ರಶ್ನಿಸುವವರು ಕೇಂದ್ರ ಸರಕಾರ ಏನು ಮಾಡುತ್ತಿದೆ ಎಂದು ಪ್ರಶ್ನಿಸಲಿ. ಅವರು ಯಾರ ಪರವಾಗಿದ್ದಾರೆ. ದುರ್ಲಾಭ ಮಾಡುವ ಮೈಕ್ರೋ ಫೈನಾನ್ಸ್ ಕಂಪೆನಿಗಳ ರಕ್ಷಣೆಗೆ ಕೇಂದ್ರ ಸರ್ಕಾರ ನಿಂತಿದ್ದೀಯಾ ಎಂದು ಪ್ರಶ್ನೆ ಮಾಡಿಕೊಳ್ಳಲಿ ಎಂದು ಅವರು ತಿರುಗೇಟು ನೀಡಿದರು.


Nk Channel Final 21 09 2023