ಉಡುಪಿ: ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿಗಳ ರೇಸ್ ನಲ್ಲಿರುವ ಪಟ್ಟಿ ಬಹಳ ದೊಡ್ಡದಾಗಿದೆ. ಯಾರ ಯಾರ ಹೆಸರಿದೆ ಎಂಬುವುದು ಸದ್ಯದಲ್ಲೇ ಬಹಿರಂಗ ಆಗಲಿದೆ. ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿಹಾಕಿಕೊಂಡಿರುವ ಸಿದ್ದರಾಮಯ್ಯನವರು ರಾಜೀನಾಮೆ ಕೊಡಲೇಬೇಕಾದ ಸಂದರ್ಭ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಅನೇಕ ಹಿರಿಯರು ಮುಖ್ಯಮಂತ್ರಿ ಆಗಲು ಕಾಯುತ್ತಿದ್ದಾರೆ. ಸಿದ್ದರಾಮಯ್ಯ ಯಾವಾಗ ರಾಜೀನಾಮೆ ಕೊಡ್ತಾರೆ ಎಂಬುವುದನ್ನೇ ಕಾದು ಕುಳಿತ್ತಿದ್ದಾರೆ. ಹೀಗಾಗಿ ಸಿದ್ದರಾಮಯ್ಯನವರು ರಾಜೀನಾಮೆ ಕೊಡುವುದಂತೂ ನಿಶ್ಚಿತ ಎಂದರು.
Ad