ಉಡುಪಿ: ಕಾಪು ಪೆಟ್ರೋಲ್ ಬಂಕ್ ಸಮೀಪ ಖಾಸಗಿ ಎಕ್ಸ್‌ಪ್ರೆಸ್‌ ಬಸ್‌ ವೊಂದ ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಪ್ರಾಣಾಪಾಯದಿಂದ ಪಾರಾದ ಘಟನೆ ವರದಿಯಾಗಿದೆ.

ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್‌ ಬಸ್‌ ಸರ್ವಿಸ್ ರಸ್ತೆಗೆ ಪ್ರವೇಶಿಸುತ್ತಿದ್ದ ಬೈಕ್‌ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬೈಕ್‌ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದು, ಬೈಕ್ ಬಸ್‌ನಡಿಯಲ್ಲಿ ಸಿಲುಕಿಕೊಂಡಿತ್ತು.

ಅಪಘಾತವನ್ನು ಗಮನಿಸಿದ ಸ್ಥಳೀಯರು ಸವಾರನನ್ನು ರಕ್ಷಿಸಿದ್ದಾರೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.