ಉಡುಪಿ: ಅಕ್ರಮ ಮರಳುಗಾರಿಕೆಗೆ ಸಹಕಾರ ಮಾಡಿರುವ ಆರೋಪದಲ್ಲಿ ಕಾಪು ಠಾಣಾಧಿಕಾರಿ ಅಬ್ದುಲ್ ಖಾದರ್ ಅಮಾನತುಗೊಂಡಿದ್ದಾರೆ. ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಮರಳುಗಾರಿಕೆ ಬಗ್ಗೆ ಕಾಪು ಠಾಣೆಯಲ್ಲಿ ದೂರು ದಾಖಲಾಗಿತ್ತು. ನಂತರ ಈ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಎಸ್ಪಿ ಡಾ.ಅರುಣ್ ಕುಮಾರ್ ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದರು.
Ad
ಆದರೆ ಅಕ್ರಮ ಮರಳುಗಾರಿಕೆ ನಡೆಸಲು ಕಾಪು ಠಾಣಾಧಿಕಾರಿಯವರು ಸಹಕರಿಸಿದ್ದಾರೆ ಎಂಬುದನ್ನು ತಿಳಿಸುವ ಆಡಿಯೋವೊಂದು ಎಸ್ಪಿ ಡಾ.ಅರುಣ್ ಅವರಿಗೆ ಲಭಿಸಿದ್ದು, ಈ ಆಡಿಯೋವನ್ನು ಕಾರ್ಕಳ ಡಿವೈಎಸ್ಪಿ ಅರವಿಂದ್ ಕಲ್ಲುಗುಜ್ಜಿಯವರ ಮೂಲಕ ವಿಚಾರಣೆ ನಡೆಸಿದ್ದಾರೆ. ಡಿವೈಎಸ್ಪಿಯವರ ವರದಿಯಲ್ಲಿ ಕಾಪು ಠಾಣಾಧಿಕಾರಿ ವಿರುದ್ಧದ ಆರೋಪವು ಮೇಲ್ನೋಟಕ್ಕೆ ಸಾಬೀತಾದ ಹಿನ್ನಲೆಯಲ್ಲಿ ಅಮಾನತುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Ad
Ad