Bengaluru 25°C
Ad

ದಲಿತ ಯುವಕನ ಶೂಟೌಟ್ ಕೇಸ್ ಸಿಒಡಿ ತನಿಖೆಗೆ ಒಪ್ಪಿಸಿ: ಸಮತಾ ಸೈನಿಕ ದಳ ಒತ್ತಾಯ

ಮೂರುವರೆ ತಿಂಗಳ ಹಿಂದೆ ಉಡುಪಿ ಜಿಲ್ಲೆಯ ಬ್ರಹ್ಮಾವರದ ಹನೆಹಳ್ಳಿಯಲ್ಲಿ ನಡೆದ ದಲಿತ ಯುವಕ ಕೃಷ್ಣ ಅವರ ಶೂಟೌಟ್- ಹತ್ಯೆ ಪ್ರಕರಣದ ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ. ಈ ಬಗ್ಗೆ ದಲಿತ ಸಂಘಟನೆಗಳು ನಿರಂತರ ಹೋರಾಟ ನಡೆಸಿದರೂ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ.

ಉಡುಪಿ: ಮೂರುವರೆ ತಿಂಗಳ ಹಿಂದೆ ಉಡುಪಿ ಜಿಲ್ಲೆಯ ಬ್ರಹ್ಮಾವರದ ಹನೆಹಳ್ಳಿಯಲ್ಲಿ ನಡೆದ ದಲಿತ ಯುವಕ ಕೃಷ್ಣ ಅವರ ಶೂಟೌಟ್- ಹತ್ಯೆ ಪ್ರಕರಣದ ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ. ಈ ಬಗ್ಗೆ ದಲಿತ ಸಂಘಟನೆಗಳು ನಿರಂತರ ಹೋರಾಟ ನಡೆಸಿದರೂ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ.

Ad
300x250 2

ಇದೀಗ ಸಮತಾ ಸೈನಿಕ ದಳದ ಸದಸ್ಯರು, ಬ್ರಹ್ಮಾವರದಲ್ಲಿ ಉಗ್ರ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ. ಪ್ರಕರಣವನ್ನು ಸಿಒಡಿ ತನಿಖೆಗೆ ನೀಡುವಂತೆ ಒತ್ತಾಯಿಸಿದರು. ಕಾಲ್ನಡಿಗೆ ಮೂಲಕ ಸಾಗಿ, ಬ್ರಹ್ಮಾವರದಲ್ಲಿ ಟಯರ್ ಗಳಿಗೆ ಬೆಂಕಿ ಹಾಕಿ ಪ್ರತಿಭಟಿಸಿದ್ದಾರೆ. ಬ್ರಹ್ಮಾವರ ಬಸ್ ನಿಲ್ದಾಣದಿಂದ ಸಾಗಿ ಬಂದ ಪ್ರತಿಭಟನಾಕಾರರು, ಪೊಲೀಸ್ ಠಾಣೆಯ ಆವರಣದಲ್ಲಿ ಧರಣಿ ನಡೆಸಿದರು. ಪೊಲೀಸರ ವಿರುದ್ಧ ಧಿಕ್ಕಾರ ಕೂಗಿದರು.

ಈ ವೇಳೆ ಸ್ಥಳಕ್ಕೆ ಭೇಟಿ ನೀಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು. ಗೃಹ ಸಚಿವರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ತಾನು ಭೇಟಿಯಾಗಿ ಮನವಿ ಮಾಡುವುದಾಗಿ ಹೇಳಿದರು. ಅಪರಾಧಿಗಳು ಎಷ್ಟೇ ಪ್ರಭಾವಿಯಾಗಿದ್ದರೂ ಪತ್ತೆ ಹಚ್ಚಬೇಕು, ಬಡ ದಲಿತ ಕುಟುಂಬಕ್ಕೆ ನ್ಯಾಯ ನೀಡಬೇಕು ಎಂದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಎಲ್ಲರಿಗೂ ರಕ್ಷಣೆ ಇದೆ ಎಂದು ಭರವಸೆ ವ್ಯಕ್ತಪಡಿಸಿದರು. ಬಡ ದಲಿತ ಯುವಕನನ್ನು ಶೂಟ್ ಔಟ್ ಮಾಡುವ ಮೂಲಕ ಕೊಂದಿರುವ ಈ ಪ್ರಕರಣದ, ನೈಜ ಆರೋಪಿಗಳನ್ನು ಪತ್ತೆ ಹಚ್ಚುವುದು ಪೊಲೀಸರಿಗೆ ದೊಡ್ಡ ತಲೆ ನೋವಾಗಿದೆ.

Ad
Ad
Nk Channel Final 21 09 2023
Ad