Ad

ಉಡುಪಿ; ಕುರ್ಪಾಡಿಯಲ್ಲಿ 36 ಮನೆಗಳಿಗೆ ತೀವ್ರ ಹಾನಿ, ಧರೆಗುರುಳಿದ ವಿದ್ಯುತ್ ಕಂಬಗಳು

ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದು ಸುರಿದ ಗಾಳೆಮಳೆಗೆ ಹಲವು ಮನೆಗಳಿಗೆ ಹಾನಿ ಸಂಭವಿಸಿದ್ದು, ಹಲವು ವಿದ್ಯುತ್ ಕಂಬಗಳು ಧರೆಗುರುಳಿವೆ.

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದು ಸುರಿದ ಗಾಳೆಮಳೆಗೆ ಹಲವು ಮನೆಗಳಿಗೆ ಹಾನಿ ಸಂಭವಿಸಿದ್ದು, ಹಲವು ವಿದ್ಯುತ್ ಕಂಬಗಳು ಧರೆಗುರುಳಿವೆ.

Ad
300x250 2

ಕರ್ಜೆ ಗ್ರಾಮದ ಕುರ್ಪಾಡಿ ಭಾಗದಲ್ಲಿ ಸುಮಾರು 36 ಮನೆಗಳಿಗೆ ತೀವ್ರ ಹಾನಿಯಾಗಿದ್ದು, ಹಲವಾರು ಮರ, ವಿದ್ಯುತ್ ಕಂಬಗಳು ಬಿದ್ದು ಸಮಸ್ಯೆಯಾಗಿದೆ. ಕಡೇಕಾರ್ ಗ್ರಾಮದಲ್ಲೂ ಹಲವು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.

ಈಗಾಗಲೇ ಕಂದಾಯ ಇಲಾಖೆ, ಮೆಸ್ಕಾಂ, ಅಗ್ನಿಶಾಮಕ ದಳದ ಅಧಿಕಾರಿಗಳು ಕಾರ್ಯಾಚರಣೆ ಮಾಡುತ್ತಿದ್ದು, ಮನೆ ಹಾನಿಯಾದ ಸಂತ್ರಸ್ತರಿಗೆ ಗರಿಷ್ಠ ಪರಿಹಾರ ಶೀಘ್ರ ಕಲ್ಪಿಸಲು ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ.

ಪೂರ್ವ ನಿಗದಿ ಕಾರ್ಯಕ್ರಮದ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿರುವ ಕಾರಣ ಶುಕ್ರವಾರ ಬೆಳಿಗ್ಗೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ad
Ad
Nk Channel Final 21 09 2023
Ad